7 ವರ್ಷ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಉಮ್ಮರ್ ನವಾಫ್ ಬಂಧನ

ಮಂಗಳೂರು ದಕ್ಷಿಣ ಉಪವಿಭಾಗದ ಪೊಲೀಸರು ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿಯೋರ್ವನನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಉಮ್ಮರ್ ನವಾಫ್‍ ಎಂದು ಗುರುತಿಸಲಾಗಿದೆ.

ಈತನ ಮೇಲೆ ಸುಮಾರು 13 ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಈತ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸುಮಾರು 7 ವರ್ಷದಿಂದ ತಲೆಮರೆಸಿಕೊಂಡಿದ್ದ. ಹೀಗಾಗಿ ಕೋರ್ಟ್ ಈತನ ಮೇಲೆ 30 ಕ್ಕಿಂತ ಹೆಚ್ಚು ವಾರಂಟ್ ಗಳನ್ನು ಹೊರಡಿಸಿತ್ತು.

ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಂತೆ ಮಂಗಳೂರು ದಕ್ಷಿಣ ಉಪವಿಭಾಗ ಕಛೇರಿಯ ವಿಶೇಷ ಕರ್ತವ್ಯ ತಂಡದ ಅಧಿಕಾರಿ ಮತ್ತು ಸಿಬ್ಬಂದಿ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ಉಮ್ಮರ್ ನವಾಫ್‌ನನ್ನು ನಿನ್ನೆ ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!