ಸಕಲೇಶಪುರದಿಂದ ಮಂಗಳೂರಿಗೆ ಅಕ್ರಮವಾಗಿ ಮರದ ದಿಮ್ಮಿ ಸಾಗಿಸುತ್ತಿದ್ದ ವಾಹನ ವಶ

ಉಪ್ಪಿನಂಗಡಿ: ಸಕಲೇಶಪುರದಿಂದ ಮಂಗಳೂರಿಗೆ ಅಗತ್ಯ ದಾಖಲೆಗಳಿಲ್ಲದೆ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವಾಹನವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.


ಆಗಸ್ಟ್ 3, 2026ರಂದು ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿನ ರಾಷ್ಟ್ರೀಯ ಹೆದ್ದಾರಿ–75ರಲ್ಲಿ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಅರಣ್ಯ ಉತ್ಪನ್ನವನ್ನು ನಿಯಮಬಾಹಿರವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು ಪರಿಶೀಲಿಸಿದರು. ಪರಿಶೀಲನೆ ವೇಳೆ ಅಗತ್ಯ ದಾಖಲೆಗಳಿಲ್ಲದೆ ಮರದ ದಿಮ್ಮಿಗಳನ್ನು ಸಾಗಾಟ ಮಾಡಿರುವುದು ಪತ್ತೆಯಾಗಿ, ವಾಹನ ಹಾಗೂ ಮರದ ದಿಮ್ಮಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.


ಕಾರ್ಯಾಚರಣೆಯಲ್ಲಿ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಹೆಚ್.ಪಿ. ರಾಘವೇಂದ್ರ, ಉಪ ವಲಯ ಅರಣ್ಯಾಧಿಕಾರಿ ವಿನಯ್ ಕುಮಾರ್, ಗಸ್ತು ಅರಣ್ಯ ಪಾಲಕರಾದ ವಿನಯ ಚಂದ್ರ ಹಾಗೂ ದೀಕ್ಷಾ ಕೆ., ಚಾಲಕ ಕಿಶೋರ್ ಕುಮಾರ್ ಕೆ. ಭಾಗವಹಿಸಿದ್ದರು.
ವಶಪಡಿಸಿಕೊಂಡ ವಾಹನ ಮತ್ತು ಮರದ ದಿಮ್ಮಿಗಳ ಒಟ್ಟು ಮೌಲ್ಯ ಸುಮಾರು ₹10 ಲಕ್ಷ ಎಂದು ಅಂದಾಜಿಸಲಾಗಿದೆ.

ಪ್ರಕರಣದ ಮುಂದಿನ ತನಿಖೆಯನ್ನು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಸಿ. ಅವರ ಮಾರ್ಗದರ್ಶನದಲ್ಲಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯಕ್ ಅವರ ನಿರ್ದೇಶನದಂತೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಹೆಚ್.ಪಿ. ರಾಘವೇಂದ್ರ ಅವರು ನಡೆಸುತ್ತಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!