ಜನಪ್ರಿಯ ವಾಗ್ಮಿ ಡಾ. ಸಿ. ಸೋಮಶೇಖರ್ ಐಎಎಸ್‌ಗೆ ‘ರಾಜರ್ಷಿ ಕೃಷ್ಣರಾಜ ಒಡೆಯರ್ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’

ಕಾಸರಗೋಡು, ಜು. 26: ಜನಪ್ರಿಯ ವಾಗ್ಮಿ, ವಿದ್ವಾಂಸ ಹಾಗೂ ದಕ್ಷ ಆಡಳಿತಾಧಿಕಾರಿಯಾದ ಬೆಂಗಳೂರು ಮೂಲದ ಡಾ. ಸಿ. ಸೋಮಶೇಖರ್ ಐಎಎಸ್ ಅವರಿಗೆ ‘ರಾಜರ್ಷಿ ಕೃಷ್ಣರಾಜ ಒಡೆಯರ್ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’ ಪ್ರದಾನ ಮಾಡಲಾಯಿತು.

ಗಡಿನಾಡು ಕಾಸರಗೋಡಿನ ಕನ್ನಡ ಭವನದ ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಅವರ ನೇತೃತ್ವದಲ್ಲಿ ನುಳ್ಳಿಪ್ಪಾಡಿಯ ಕನ್ನಡ ಭವನ ಬಯಲು ರಂಗಮಂಟಪದಲ್ಲಿ ಆಯೋಜಿಸಲಾದ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಅವರು ಡಾ. ಸಿ. ಸೋಮಶೇಖರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಶ್ರೀಮದ್ ಎಡನೀರು ಮಠದ ಪೀಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು.

ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಸಿ. ಸೋಮಶೇಖರ್ ಅವರು ಭಾಗವಹಿಸಿ ಕನ್ನಡ ಭಾಷೆ, ಸಾಹಿತ್ಯ ಹಾಗೂ ಗಡಿನಾಡಿನ ಕನ್ನಡಿಗರ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳನ್ನು ಪ್ರಸ್ತುತಪಡಿಸಿದರು. ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು, ಸಾಹಿತ್ಯಾಸಕ್ತರು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!