ರಕ್ತದಾನ ಮಾಡಿ, ನಿಗದಿತ ಸಮಯಕ್ಕೆ ಕಾರ್ಯಕ್ರಮಕ್ಕೆ ಆಗಮಿಸಿದ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ; ಸಾಮಾಜಿಕ ಕಳಕಳಿಗೆ ಮಾದರಿ

ಕಾಸರಗೋಡು: ಸಾಮಾಜಿಕ ಕಳಕಳಿಯ ಕಾರ್ಯಗಳಿಂದ ಗುರುತಿಸಿಕೊಂಡಿರುವ ಸಪ್ತ ಭಾಷಾ ಸಂಗಮ ಭೂಮಿ ಖ್ಯಾತಿಯ ಕಾಸರಗೋಡಿನ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಅವರು ತಮ್ಮ ಸೇವಾ ಮನೋಭಾವದಿಂದ ಮತ್ತೊಮ್ಮೆ ಮಾದರಿಯಾಗಿದ್ದಾರೆ.

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ‘ಸೇವಾ ಸಂಭ್ರಮ-ಗ್ರಾಮೋತ್ಸವ 2026’ ಅಂಗವಾಗಿ ನಡೆದ ಬೃಹತ್ ವೈದ್ಯಕೀಯ ಶಿಬಿರದಲ್ಲಿ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಅವರು ರಕ್ತದಾನ ಮಾಡಿ ಸಮಾಜಮುಖಿ ಕಾರ್ಯಕ್ಕೆ ಕೈಜೋಡಿಸಿದರು.

ರಕ್ತದಾನ ಮಾಡಿದ ಬಳಿಕ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಕಾಸರಗೋಡಿನಿಂದ ಪ್ರಯಾಣಿಸಿ, ಡಾ. ವಾಮನ್ ರಾವ್ ಬೇಕಲ್ ಮತ್ತು ಸಂಧ್ಯಾರಾಣಿ ಟೀಚರ್ ಅವರ ರೂವಾರಿತ್ವದ ಕನ್ನಡ ಭವನದ ನಿರ್ದೇಶಕರಾಗಿ, ಹಾಗೂ ಕನ್ನಡ ಭವನದ ರಜತ ಸಂಭ್ರಮ ಸಮಾರೋಪದ ಅಂಗವಾಗಿ ನಡೆಯುತ್ತಿರುವ ಗಡಿನಾಡು ಕರ್ನಾಟಕ ಕನ್ನಡ ಸಮ್ಮೇಳನ 2026ರ ಸಮಿತಿ ಅಧ್ಯಕ್ಷರಾಗಿ ನಿಗದಿಯಾಗಿದ್ದ ಕಾರ್ಯಕ್ರಮಕ್ಕೆ ಸಮಯಕ್ಕೆ ಸರಿಯಾಗಿ ಆಗಮಿಸಿದರು.

ಸಮಾಜ ಸೇವೆಯ ಜೊತೆಗೆ ಕರ್ತವ್ಯ ಬದ್ಧತೆಯನ್ನು ತೋರಿದ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಅವರ ಈ ಕಾರ್ಯವು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದ್ದು, ಸಮಾಜಕ್ಕೆ ಮಾದರಿಯಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!