ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಾದ್ಯಂತ ಮಳೆಯ ಆರ್ಭಟ ಮುಂದುವರಿದಿದೆ. ಆಗಸ್ಟ್ 1 ರಂದು ಸುರಿದ ಭಾರೀ ಮಳೆಗೆ ಹಲವೆಡೆ ಸಂಪರ್ಕ ಕಡಿತ, ಗುಡ್ಡ ಜರಿತ, ತೋಟ ಮತ್ತು ಮನೆಗಳು ಜಲಾವೃತಗೊಂಡು ವ್ಯಾಪಕ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಅವರು ಅವರು ಇಂದು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ವಿವಿದೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಲಾಯಿಲ ಭಾಗದಲ್ಲಿ ಸಂಪರ್ಕ ಕಡಿತಗೊಂಡಿರುವ ರಸ್ತೆಗಳು ಮತ್ತು ಗುಡ್ಡ ಕುಸಿತದ ಸಾಧ್ಯತೆ ಇರುವ ಪ್ರದೇಶಗಳನ್ನು ಪರಿಶೀಲಿಸಿದರು. ಸಂತ್ರಸ್ತರೊಂದಿಗೆ ಸಚಿವರು ಮಾತುಕತೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ಸಂತ್ರಸ್ತ ಕುಟುಂಬಗಳಿಗೆ ಕನಿಷ್ಟ ಪರಿಹಾರವೂ ನೀಡಿಲ್ಲ ಎಂದು ಗಮನ ಸೆಳೆದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು ತುರ್ತು ಪರಿಹಾರ ಯಾಕೆ ನೀಡಿಲ್ಲ ಎಂದು ಪ್ರಶ್ನಿಸಿದರು .ಇಂದು ಸಂಜೆಯೊಳಗೆ ಪ್ರವಾಹದಿಂದ ಸಂತ್ರಸ್ತರಾದವರಿಗೆ ತಾತ್ಕಾಲಿಕ ಪರಿಹಾರವನ್ನು ವಿವರಿಸುವಂತೆ ಸೂಚಿಸಿದರು.


