ಕೆತ್ತಿಕಲ್‌ನಲ್ಲಿ ಮತ್ತೆ ಗುಡ್ಡ ಕುಸಿತ; ಸಂಪೂರ್ಣ ಕುಸಿತದ ಭೀತಿ, ವಾಹನ ಸಂಚಾರಕ್ಕೆ ನಿರ್ಬಂಧ

ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಕೆತ್ತಿಕಲ್ ಸಮೀಪ ಮಂಗಳವಾರ ಗುಡ್ಡ ಮತ್ತೆ ಕುಸಿದು ಬಿದ್ದಿದೆ. ಗುಡ್ಡ ಸಂಪೂರ್ಣವಾಗಿ ಕುಸಿಯುವ ಭೀತಿ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಏಕಮುಖ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.


ಕೆತ್ತಿಕಲ್ ಭಾಗದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಹಾಗೂ ತಡೆಗೋಡೆ ನಿರ್ಮಾಣದ ಅವೈಜ್ಞಾನಿಕ ಕಾಮಗಾರಿಯೇ ಈ ಸತತ ಗುಡ್ಡ ಕುಸಿತಕ್ಕೆ ಪ್ರಮುಖ ಕಾರಣ ಎಂದು ಸ್ಥಳೀಯರು ಹಾಗೂ ಸವಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುಡ್ಡದ ತಳಭಾಗವನ್ನು ಅಪಾಯಕಾರಿಯಾಗಿ ಅಗೆದಿರುವುದರಿಂದ ಮಳೆಯ ರಭಸಕ್ಕೆ ಮಣ್ಣು ಮತ್ತು ಬೃಹತ್ ಬಂಡೆಗಳು ರಸ್ತೆಗೆ ಜಾರುತ್ತಿವೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!