ಮಂಗಳೂರು, ಆ.6: ದಕ್ಷಿಣ ಕನ್ನಡ ಜಿಲ್ಲಾ ರಾಮಕ್ಷತ್ರಿಯ ಸಂಘಗಳ ಒಕ್ಕೂಟ (ರಿ.) ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ರಾಮಕ್ಷತ್ರಿಯ ಸಮಾಜದ 2025-26ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಗಸ್ಟ್ 30ರಂದು ಆಯೋಜಿಸಲಾಗಿದೆ.

ಮಂಗಳೂರಿನ ಬಾಳಂಭಟ್ನ ಶ್ರೀ ರಾಧಾಕೃಷ್ಣ ಹಾಲ್ನಲ್ಲಿ ಆಗಸ್ಟ್ 30ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಪದವಿ, ಸ್ನಾತಕೋತ್ತರ ಹಾಗೂ ಉನ್ನತ ಸ್ನಾತಕೋತ್ತರ ಪದವಿಗಳಲ್ಲಿ ಬ್ಯಾಂಕ್ ಅಥವಾ ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳು, ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಸರ್ಕಾರದಿಂದ ಪುರಸ್ಕೃತರಾಗಿ ವಿಶಿಷ್ಟ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಗುವುದು.

ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಕಾರ್ಯಕ್ರಮಕ್ಕೆ ಅರ್ಹರಾಗಿರುವ ಅಭ್ಯರ್ಥಿಗಳು ನಿಗದಿತ ಅರ್ಜಿಯೊಂದಿಗೆ ಅಂಕಪಟ್ಟಿ ಹಾಗೂ ವಿಶೇಷ ಸಾಧನೆಯ ಪ್ರಮಾಣಪತ್ರದ ಪ್ರತಿಗಳನ್ನು ಲಗತ್ತಿಸಿ, ತಮ್ಮ ಸ್ಥಳೀಯ ರಾಮಕ್ಷತ್ರಿಯ ಸಂಘದ ಮೂಲಕ ದಕ್ಷಿಣ ಕನ್ನಡ ಜಿಲ್ಲಾ ರಾಮಕ್ಷತ್ರಿಯ ಸಂಘಗಳ ಒಕ್ಕೂಟಕ್ಕೆ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 20, 2026 ಕೊನೆಯ ದಿನಾಂಕವಾಗಿದ್ದು, ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಒಕ್ಕೂಟ ಮನವಿ ಮಾಡಿದೆ.
ಹೆಚ್ಚಿನ ಮಾಹಿತಿಗಾಗಿ ಅಧ್ಯಕ್ಷರು 9902179263, ಕಾರ್ಯದರ್ಶಿ 9845245196 ಹಾಗೂ ಜೊತೆ ಕಾರ್ಯದರ್ಶಿ 9481978620ರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


