ಕಾಸರಗೋಡು, ಆ.6: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ (ರಿ.) ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಕಾಸರಗೋಡು ಜಿಲ್ಲಾ ಘಟಕದ ಜಂಟಿ ಆಶ್ರಯದಲ್ಲಿ ‘ಸ್ನೇಹ ತರಂಗ’ ಪತ್ರಕರ್ತರ ಕುಟುಂಬ ಮಿಲನ ಕಾರ್ಯಕ್ರಮವು ಆಗಸ್ಟ್ 16ರಂದು (ಭಾನುವಾರ) ಬೆಳಿಗ್ಗೆ 9.30ಕ್ಕೆ ಕಾಸರಗೋಡು ಹೊಸ ಬಸ್ ನಿಲ್ದಾಣದ ಸಮೀಪದ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ.

ಹಿರಿಯ ಪತ್ರಕರ್ತ ಹಾಗೂ ಕನ್ನಡಪರ ಹೋರಾಟಗಾರ ಅಶೋಕ ಯಂಕಪ್ಪ ಚಂದರಗಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಕಾಸರಗೋಡು ಶಾಸಕ ಕಲ್ಲಟ್ರ ಮಾಹಿನ್ ಹಾಜಿ, ಧಾರ್ಮಿಕ ಹಾಗೂ ಸಾಮಾಜಿಕ ಮುಂದಾಳು ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಹಾಗೂ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಸಂಸ್ಥಾಪಕ ಎಸ್. ಪ್ರದೀಪ್ ಕುಮಾರ್ ಕಲ್ಕೂರು ಅವರು ಸ್ನೇಹ ಸಂದೇಶ ನೀಡಲಿದ್ದಾರೆ.

ಮಾಜಿ ಶಾಸಕ ಹಾಗೂ ಕರ್ನಾಟಕ ಸರ್ಕಾರದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರು ಸ್ನೇಹ ಗೌರವ ಪ್ರದಾನ ಮಾಡಲಿದ್ದು, ರಾಷ್ಟ್ರೀಯ ಪ್ರಶಸ್ತಿ ವಿಜೇತ ಶ್ರೇಷ್ಠ ಪೋಷಕ ನಟಿ ಕು. ರೂಪಶ್ರೀ ವರ್ಕಾಡಿ, ಗ್ಲೋಬಲ್ ಐಕಾನ್ ಹೆಲ್ತ್ ಕೇರ್ ಪ್ರಶಸ್ತಿ ವಿಜೇತ ಡಾ. ಮಲ್ಲಿಕಾರ್ಜುನ ಎಸ್. ನಾಸಿ, ರಾಷ್ಟ್ರೀಯ ಗೌರವ ಐಕಾನ್ ಪ್ರಶಸ್ತಿ–2026 ಪುರಸ್ಕೃತ ಶಾಫಿ ಬಂಡಸಾಲೆ ಹಾಗೂ ಸಾಧಕಶ್ರೇಷ್ಠ ಪ್ರಶಸ್ತಿ ವಿಜೇತ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಅವರನ್ನು ಗೌರವಿಸಲಾಗುವುದು.

ಇದೇ ಸಂದರ್ಭದಲ್ಲಿ ‘ಸ್ನೇಹ ತರಂಗ’ ಕಾರ್ಯಕ್ರಮದ ಅಂಗವಾಗಿ ಡಾ. ಜಯಪ್ರಕಾಶ್ ನಾರಾಯಣ ತೊಟ್ಟಿತ್ತೋಡಿ, ಟಿ. ಶಂಕರ ನಾರಾಯಣ ಭಟ್, ಪ್ರೊ. ಎ. ಶ್ರೀನಾಥ್, ನ್ಯಾ. ಟಿ.ವಿ. ಗಂಗಾಧರನ್ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ.
ಕಾರ್ಯಕ್ರಮದ ಯಶಸ್ಸಿಗೆ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷ ಎ.ಆರ್. ಸುಬ್ಬಯ್ಯಕಟ್ಟೆ, ರಾಜ್ಯ ಸಮಿತಿ ಸದಸ್ಯ ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಕಾರ್ಯದರ್ಶಿ ಗಂಗಾಧರ ತೆಕ್ಕೆಮೂಲೆ, ಕೋಶಾಧಿಕಾರಿಗಳಾದ ಅಜಿತ್ ಸ್ವರ್ಗ ಹಾಗೂ ಶ್ರೀಕಾಂತ್ ನೆಟ್ಟಣಿಗೆ ಸೇರಿದಂತೆ ಪದಾಧಿಕಾರಿಗಳು ಪತ್ರಕರ್ತರು ಹಾಗೂ ಕುಟುಂಬ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.

“ಐಕ್ಯವೊಂದೇ ಮಂತ್ರ, ಐಕ್ಯದಿಂದ ಸ್ವತಂತ್ರ, ಐಕ್ಯಗಾನದಿ ರಾಷ್ಟ್ರ ತೇಲುತಿರಲಿ” ಎಂಬ ನಾಡೋಜ ಡಾ. ಕಯ್ಯಾರ ಕಿಂಞಣ್ಣ ರೈ ಅವರ ಸಂದೇಶದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮವು ಪತ್ರಕರ್ತರ ಒಗ್ಗಟ್ಟು ಮತ್ತು ಸ್ನೇಹ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿರೀಕ್ಷೆ ಮೂಡಿಸಿದೆ.


