ಉಳ್ಳಾಲ:ಅವಿವಾಹಿತ ಯುವಕನೋರ್ವನು ಮನೆಯ ಕೋಣೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಸರಕಾರಿ ಶಾಲಾ ಬಳಿ ನಡೆದಿದೆ.
ನಿತಿನ್ ಕುಮಾರ್ ಯಾನೆ ನೀತು(35)ಆತ್ಮಹತ್ಯೆಗೈದ ಯುವಕನಾಗಿದ್ದಾನೆ.

ಮೂಲತ: ಕೋಟೆಕಾರು ಪಟ್ಟಣದ ಕೊಂಡಾಣ,ಮಿತ್ರನಗರ ನಿವಾಸಿಯಾಗಿರುವ ನಿತಿನ್ ಪಿಲಾರುವಿನ ಬಾವ (ಅಕ್ಕನ ಗಂಡ)ಲಕ್ಷ್ಮಣ ಪಕ್ಕಳ ಅವರ ಮನೆಯಲ್ಲಿ ವಾಸವಿದ್ದರು.ತೊಕ್ಕೊಟ್ಟು ಕಾಪಿಕಾಡುವಿನ ಕ್ಯಾಟರಿಂಗ್ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದ ಅವರು ಎರಡು ವರುಷಗಳಿಂದ ವೆರಿಕೋಸ್ ಕಾಯಿಲೆಯಿಂದ ಬಳಲುತ್ತಿದ್ದರಂತೆ.

ಕಳೆದ ನಾಲ್ಕೈದು ದಿನಗಳಿಂದ ಜ್ವರ ಭಾದೆಯಿಂದ ಮನೆಯಲ್ಲೇ ಉಳಿದಿದ್ದ ಅವರು ಮಂಗಳವಾರ ರಾತ್ರಿ ಊಟ ಮುಗಿಸಿ ಕೋಣೆಗೆ ಸೇರಿದ ಬಳಿಕ ಆತ್ಮಹತ್ಯೆ ನಡೆಸಿದ್ದಾರೆನ್ನಲಾಗಿದೆ.
ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದಾರೆ.


