ಮಂಜೇಶ್ವರ: ಮಂಜೇಶ್ವರ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯನ್ನು ಕೂಡಲೇ ಪರಿಹರಿಸಬೇಕು ಎಂದು ಆಗ್ರಹಿಸಿ ಡಿವೈಎಫ್‌ಐ ವತಿಯಿಂದ ತಾಲೂಕು ಆಸ್ಪತ್ರೆ ಮಾರ್ಚ್ ನಡೆಸಲಾಯಿತು.

ಆಸ್ಪತ್ರೆಯಲ್ಲಿ ಅಗತ್ಯ ಸಂಖ್ಯೆಯ ವೈದ್ಯರ ಕೊರತೆಯಿಂದಾಗಿ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.


ಡಿವೈಎಫ್‌ಐ ಜಿಲ್ಲಾ ಅಧ್ಯಕ್ಷ ಕಾಂ. ಎಂ.ವಿ. ರತೀಶ್ ಮಾರ್ಚ್‌ನ್ನು ಉದ್ಘಾಟಿಸಿ ಮಾತನಾಡಿದರು. ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಸೇರಿದಂತೆ ಸಾರ್ವಜನಿಕ ಆರೋಗ್ಯ ಸೇವೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಬೇಕೆಂದು ಅವರು ಒತ್ತಾಯಿಸಿದರು.
ಡಿವೈಎಫ್‌ಐ ಕಾರ್ಯಕರ್ತರು ಹಾಗೂ ಸ್ಥಳೀಯರು ಮಾರ್ಚ್‌ನಲ್ಲಿ ಭಾಗವಹಿಸಿದ್ದರು.

