ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

ಮಂಗಳೂರು: ಸುಮಾರು ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಂಗಳೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಗುರುಪುರ-ಉಳಾಯಿಬೆಟ್ಟು ನಿವಾಸಿ ಮೊಹಮ್ಮದ್ ಇಮ್ರಾನ್ (36) ಬಂಧಿತ ಆರೋಪಿ. ಈತನ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 10/2020ನೇ ಪ್ರಕರಣದಲ್ಲಿ ಐಪಿಸಿ ಕಲಂ 376 ಹಾಗೂ 506 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯದ ಸಿ.ಸಿ. ನಂ. 2225/2021ರಲ್ಲಿ ಆರೋಪಿಯ ವಿರುದ್ಧ ವಾರೆಂಟ್ ಬಾಕಿ ಇತ್ತು.

ಸುಮಾರು ಆರು ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಮಹಿಳಾ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಪತ್ತೆಹಚ್ಚಿ ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆಗಸ್ಟ್ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಇದಲ್ಲದೆ, ಆರೋಪಿಯ ವಿರುದ್ಧ ಪುತ್ತೂರು ಮಹಿಳಾ ಠಾಣೆಯ 16/2020ನೇ ಪ್ರಕರಣದಲ್ಲಿ ಐಪಿಸಿ ಕಲಂ 342, 363 ಹಾಗೂ ಪೋಕ್ಸೋ ಕಾಯ್ದೆಯ ಕಲಂ 12ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಅದೇ ರೀತಿ ಕಂಕನಾಡಿ ನಗರ ಪೊಲೀಸ್ ಠಾಣೆಯ ಅ.ಕ್ರ. 149/2012ನೇ ಪ್ರಕರಣದಲ್ಲಿ ಐಪಿಸಿ ಕಲಂ 384 ಹಾಗೂ 34ರ ಅಡಿಯಲ್ಲಿ ದಾಖಲು.

SHARE
Loading spinner

Leave a Reply

Your email address will not be published. Required fields are marked *

error: Content is protected !!