‘ಮಹಿಳೆ ಧರಿಸುವ ಉಡುಪು ಲೈಂಗಿಕ ದೌರ್ಜನ್ಯಕ್ಕೆ ಸಮರ್ಥನೆಯಲ್ಲ’: ದೆಹಲಿ ಹೈಕೋರ್ಟ್ ಮಹತ್ವದ ಅಭಿಪ್ರಾಯ

‘ಮಹಿಳೆ ಧರಿಸುವ ಉಡುಪು ಲೈಂಗಿಕ ದೌರ್ಜನ್ಯಕ್ಕೆ ಯಾವುದೇ ರೀತಿಯಲ್ಲೂ ಸಮರ್ಥನೆಯಾಗುವುದಿಲ್ಲ’ ಎಂದು ದೆಹಲಿ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಮಹಿಳೆಯರನ್ನು ನಿಯಂತ್ರಿಸುವ ಬದಲು ಪುರುಷರ ವರ್ತನೆಯಲ್ಲಿ ಬದಲಾವಣೆ ತರಬೇಕಿದೆ ಎಂದು ನ್ಯಾಯಾಲಯ ಹೇಳಿದೆ.

ಮಹಿಳೆಯ ಉಡುಪು ಧರಿಸುವ ರೀತಿಯನ್ನು ಮುಂದಿಟ್ಟುಕೊಂಡು ಆಕೆಯನ್ನು ದೂಷಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸುವ ಸಂದರ್ಭದಲ್ಲಿ ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಮಹಿಳೆಯರನ್ನು ನಿಯಂತ್ರಿಸುವ ಬದಲು ಪುರುಷರ ವರ್ತನೆಯಲ್ಲಿ ಬದಲಾವಣೆ ತರಬೇಕಿದೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಪ್ರತಿಯೊಬ್ಬರನ್ನೂ ಗೌರವದಿಂದ ಕಾಣುವಂತೆ ಮಕ್ಕಳಿಗೆ ಪೋಷಕರು ಹಾಗೂ ಸಮಾಜ ಶಿಕ್ಷಣ ನೀಡಬೇಕು ಎಂದು ನ್ಯಾಯಮೂರ್ತಿ ಚಂದ್ರಶೇಖರ್ ಸುಧಾ ಅಭಿಪ್ರಾಯಪಟ್ಟಿದ್ದಾರೆ.

ವಿಚಾರಣೆ ವೇಳೆ ಆರೋಪಿಯ ಪರ ವಕೀಲರು ನಡೆಸಿದ ಪ್ರತಿಪ್ರಶ್ನೆ ಹಾಗೂ ವಾದಗಳ ರೀತಿಯಲ್ಲೂ ಬಾಲಕಿಯ ಚಾರಿತ್ರ್ಯವನ್ನು ಪ್ರಶ್ನಿಸುವ ಪ್ರಯತ್ನ ನಡೆದಿರುವುದನ್ನು ನ್ಯಾಯಾಲಯ ಟೀಕಿಸಿದೆ.

ಬಾಲಕಿಯ ಉಡುಪು, ಆಕೆಯ ಉಡುಪು ಧರಿಸುವ ರೀತಿಯ ಬಗ್ಗೆ ವ್ಯಕ್ತಪಡಿಸಿದ ಆಕ್ಷೇಪಣೆ ಸೇರಿದಂತೆ ಹಲವು ವಿಚಾರಗಳ ಕುರಿತು ಪ್ರಶ್ನೆಗಳನ್ನು ಕೇಳಲಾಗಿತ್ತು ಎಂದು ನ್ಯಾಯಾಲಯ ಗಮನಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!