ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನೆ ನಡೆಯಿತು.


ಹೋರಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳದ ಅಧ್ಯಕ್ಷ ಅಕ್ಷಿತ್ ಸುವರ್ಣ ನೇತೃತ್ವದಲ್ಲಿ ಜಿಲ್ಲೆಯ ಯುವ ಜೆಡಿಎಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದರು.

ಬಿಡದಿ ಟೌನ್‌ಶಿಪ್ ಯೋಜನೆಯಿಂದ ಉಂಟಾಗಬಹುದಾದ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ನಡೆದ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಯುವ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು.


ಈ ಸಂದರ್ಭದಲ್ಲಿ ಯುವ ಜೆಡಿಎಸ್ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ರತೀಶ್ ಕರ್ಕೇರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿತೇಶ್ ರೈ, ಪದಾಧಿಕಾರಿಗಳಾದ ವಿನಿತ್ ಪೂಜಾರಿ, ಸುಶಾಂತ್ ಪೂಜಾರಿ, ನಿಶಾಂತ್, ಪ್ರೀತೇಶ್ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.


