ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವ ಆದೇಶ ಖಂಡಿಸಿ ಹಾಗೂ ನೀರಾವರಿ ಯೋಜನೆಗಳ ಜಾರಿಗೆ ಆಗ್ರಹಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಜನಜೀವನ ಸಹಜವಾಗಿದ್ದು, ಬಸ್ ಸಂಚಾರ, ಶಾಲಾ-ಕಾಲೇಜು, ಸರ್ಕಾರಿ ಕಚೇರಿ ಹಾಗೂ ತುರ್ತು ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಕೆಲ ಕನ್ನಡಪರ ಹಾಗೂ ರೈತ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿದ್ದರೆ, ಹಲವು ಪ್ರಮುಖ ಸಂಘಟನೆಗಳು ದೂರ ಉಳಿದಿವೆ.

ಮಂಡ್ಯ, ಮೈಸೂರಿನಲ್ಲಿ ಪ್ರತಿಭಟನೆ: ಮಂಡ್ಯದಲ್ಲಿ ಅಂಗಡಿ-ಮುಂಗಟ್ಟುಗಳು ಬಂದ್ ಆಗಿದ್ದು, ಸಾರಿಗೆ ಸಂಚಾರ ವಿರಳವಾಗಿದೆ. ಮೈಸೂರಿನಲ್ಲಿ ಪ್ರತಿಭಟನೆಗಳು ನಡೆದರೂ ಬಸ್ ಸಂಚಾರ ಮುಂದುವರಿದಿದೆ.

ಮಂಡ್ಯದಲ್ಲಿ ಮದ್ಯ ಮಾರಾಟ ನಿಷೇಧ: ಬಂದ್ ಹಿನ್ನೆಲೆಯಲ್ಲಿ ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣ ಹಾಗೂ ಕೆ.ಆರ್. ಪೇಟೆ ತಾಲೂಕುಗಳಲ್ಲಿ ಮದ್ಯ ಮಾರಾಟ, ಸಾಗಣೆ ಮತ್ತು ದಾಸ್ತಾನಿಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಮುಂಜಾಗ್ರತಾ ಕ್ರಮವಾಗಿ ಪ್ರಮುಖ ಸ್ಥಳಗಳಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!