ಪಾವೂರು ಅಂಗನವಾಡಿಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಪಾವೂರು: ಪಾವೂರು ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆಯರು, ಪುಟಾಣಿ ಮಕ್ಕಳು, ಪೋಷಕರು ಹಾಗೂ ಸ್ಥಳೀಯ ಗಣ್ಯರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮ ದೇಶಭಕ್ತಿಯ ವಾತಾವರಣಕ್ಕೆ ಸಾಕ್ಷಿಯಾಯಿತು.


ಕಾರ್ಯಕ್ರಮದ ಸ್ವಾಗತ ಭಾಷಣವನ್ನು ಅಂಗನವಾಡಿ ಶಿಕ್ಷಕಿ ಶೈಲಜಾ ಅವರು ನೆರವೇರಿಸಿದರು. ಅಬೂಬಕ್ಕರ್ ಸಿದ್ದಿಕ್ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ವರ್ಕಾಡಿ ಪಂಚಾಯತ್ ಅಧ್ಯಕ್ಷ ಪುತ್ತು ಚಾ ಅವರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಿದರು.


ಸ್ವಾತಂತ್ರ್ಯೋತ್ಸವವನ್ನು ಕೇವಲ ಒಂದು ದಿನದ ಆಚರಣೆಗೆ ಸೀಮಿತಗೊಳಿಸದೆ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ದೇಶಪ್ರೇಮ ಹಾಗೂ ಮೌಲ್ಯಗಳನ್ನು ಇಂದಿನ ಮಕ್ಕಳಿಗೆ ತಿಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಅವರು ಹೇಳಿದರು. ಸ್ವಾತಂತ್ರ್ಯದ ಮಹತ್ವವನ್ನು ಬಾಲ್ಯದಿಂದಲೇ ಮಕ್ಕಳಲ್ಲಿ ಬೆಳೆಸಬೇಕು ಎಂದು ಕರೆ ನೀಡಿದರು.


ತೀಯಾ ಸಮಿತಿ ಅಧ್ಯಕ್ಷ ಗಣೇಶ್ ಪಾವೂರು ಅವರು ಕಾರ್ಯಕ್ರಮದ ಕುರಿತು ಮಾತನಾಡಿ, ದೇಶದ ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸುವಲ್ಲಿ ಯುವ ಪೀಳಿಗೆಯ ಪಾತ್ರ ಮಹತ್ವದ್ದಾಗಿದೆ ಎಂದರು. ಮಂಜೇಶ್ವರ ಬ್ಲಾಕ್ ಸದಸ್ಯೆ ಎಸ್.ಎ.ಬಿ. ಫಾತಿಮ್ಮ ಅವರು ಮಾತನಾಡಿ, ಮಕ್ಕಳಲ್ಲಿ ದೇಶಭಕ್ತಿ ಮತ್ತು ರಾಷ್ಟ್ರೀಯ ಏಕತೆಯ ಭಾವನೆ ಮೂಡಿಸುವ ಇಂತಹ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿದರು.
ಸಾಮಾಜಿಕ ಸೇವಕ ಬದ್ರುದ್ದೀನ್ ಪಾವೂರು ಸೇರಿದಂತೆ ಆನ್ಸರ್ ಕುಂಡಪು, ಇಸ್ಮಾಯಿಲ್ ಕುಂಡಪು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. ಅಂಗನವಾಡಿಯ ಪುಟಾಣಿ ಮಕ್ಕಳು ರಾಷ್ಟ್ರಧ್ವಜ ಹಾಗೂ ದೇಶಭಕ್ತಿ ಬಿಂಬಿಸುವ ವೇಷಭೂಷಣಗಳಲ್ಲಿ ಭಾಗವಹಿಸಿದ್ದು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು.


ಕಾರ್ಯಕ್ರಮದಲ್ಲಿ ಅಂಗನವಾಡಿ ಮಕ್ಕಳು, ಮಹಿಳೆಯರು, ತಾಯಂದಿರು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಹೆಚ್ಚಿಸಿದರು. ದೇಶಭಕ್ತಿ, ಏಕತೆ ಹಾಗೂ ಸ್ವಾತಂತ್ರ್ಯದ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಸಂದೇಶದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!