ಚೇವಾರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಚೇವಾರು: ಸ್ಥಳೀಯ ಚೇವಾರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು.


ಶಾಲಾ ಆವರಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ವಾರ್ಡ್ ಪ್ರತಿನಿಧಿ ಅಬ್ದುಲ್ ಅಸೀಸ್ ಚೇವಾರ್ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಕಲಂದರ್ ಶಾಫಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾತೃ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಸ್ಮಿತಾ ಅವರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ರಾಜೇಶ್ವರಿ.ಬಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಶ್ರೀ ಶ್ಯಾಮ್ ಭಟ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನಗಳ ಕುರಿತು ವಿದ್ಯಾರ್ಥಿಗಳಿಗೆ ವಿವರವಾದ ಮಾಹಿತಿ ನೀಡಿದರು. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಈ ಸಂದರ್ಭದಲ್ಲಿ ಬಹುಮಾನಗಳನ್ನು ವಿತರಿಸಿ ಗೌರವಿಸಲಾಯಿತು.


ಸಾಂಸ್ಕೃತಿಕ ವೈಭವ
ವೇದಿಕೆಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ದೇಶಭಕ್ತಿ ಗೀತೆಗಳು ಹಾಗೂ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ರವಿಕುಮಾರ್ ಸ್ವಾಗತಿಸಿ, ಪ್ರೀಮಾ ಕ್ರಾಸ್ತಾ ವಂದಿಸಿದರು.ಪ್ರಸಾದ್ ರೈ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದ ಯಶಸ್ಸಿಗೆ ಶಾಲಾ ಶಿಕ್ಷಕಿಯರಾದ ಪ್ರಮೀಳಾ ಡಿ.ಎನ್, ಗೀತಾಂಜಲಿ, ಕವಿತಾ ಹಾಗೂ ಶಿಕ್ಷಕರಾದ ಮೊಹಮ್ಮದ್ ಫಾಹಿಸ್, ರತೀಶ್, ಅನೀಶ್ ಮತ್ತು ಗೋಪಾಲಕೃಷ್ಣ ಭಟ್ ಅವರು ಸಕ್ರಿಯವಾಗಿ ಸಹಕರಿಸಿದರು. ಊರಿನ ಗಣ್ಯರು, ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!