ಪೆರ್ಲ: ಎಣ್ಮಕಜೆ ಗ್ರಾಮ ಪಂಚಾಯಿತಿಯ ನೇತೃತ್ವದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸ್ವಾತಂತ್ರ್ಯ ದಿನಾಚರಣೆ, ರ್ಯಾಲಿ, ಅಭಿನಂದನಾ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭವನ್ನು ಆಯೋಜಿಸಲಾಯಿತು.


ಪಂಚಾಯಿತಿ ವ್ಯಾಪ್ತಿಯ ಎಸ್ಎಸ್ಎಲ್ಸಿ ಮತ್ತು ಪ್ಲಸ್ ಟು ಪರೀಕ್ಷೆಗಳಲ್ಲಿ ಎ ಪ್ಲಸ್ ಪಡೆದ ವಿದ್ಯಾರ್ಥಿಗಳು ಹಾಗೂ ಉತ್ತಮ ಸಾಧನೆ ಮಾಡಿದ ಪಿಯುಸಿ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಎಂಟು ಮಂದಿಯನ್ನು ಸನ್ಮಾನಿಸಲಾಯಿತು. ಉತ್ತಮ ಪ್ರತಿಭೆ ತೋರಿದವರಿಗೆ ಪ್ರತಿಭಾ ಪುರಸ್ಕಾರಗಳನ್ನು ವಿತರಿಸಲಾಯಿತು.


ಪೆರ್ಲ ಭಾರತೀ ಸದನದಲ್ಲಿ ನಡೆದ ಕಾರ್ಯಕ್ರಮವನ್ನು ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕೆ.ಎಂ. ಅಶ್ರಫ್ ಉದ್ಘಾಟಿಸಿದರು. ಪಂಚಾಯಿತಿ ಅಧ್ಯಕ್ಷೆ ಕುಸುಮಾವತಿ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಾಬು ಅಬ್ರಹಾಂ, ಜಿಲ್ಲಾ ಪಂಚಾಯಿತಿ ಸದಸ್ಯ ಸೋಮಶೇಖರ ಜೆ.ಎಸ್. ಹಾಗೂ ಎ.ಡಿ.ಎಂ. ಉದಯಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಾಧಾಕೃಷ್ಣ ಕೆ. ಸ್ವಾಗತಿಸಿದರು. ವಿವಿಧ ಜನಪ್ರತಿನಿಧಿಗಳು ಹಾಗೂ ಸಾಂಸ್ಕೃತಿಕ ಕ್ಷೇತ್ರದ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಪಂಚಾಯಿತಿ ಉಪಾಧ್ಯಕ್ಷ ಅಬೂಬಕರ್ ಸಿದ್ದೀಖ್ ಒಲಮುಗರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ರಮ್ಲಾ ಇಬ್ರಾಹಿಂ, ರಾಧಾಕೃಷ್ಣ ನಾಯಕ್, ವಿಜಯ ಕೆ., ಮಂಜೇಶ್ವರ ಬ್ಲಾಕ್ ಪಂಚಾಯಿತಿ ಸದಸ್ಯೆ ನಫೀಸತ್ ಮಿಸಿರಿಯಾ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಎಣ್ಮಕಜೆ ಪಂಚಾಯಿತಿಯ ನೇತೃತ್ವದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಅಭಿನಂದನೆ ಹಾಗೂ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಇದು ಆರನೇ ವರ್ಷವಾಗಿದೆ.


Thông tin hữu ích quá. Letco tự hào là công ty tư vấn du học Hàn Quốc uy tín, cam kết đồng hành đến khi bạn nhập học thành công. Xem thêm tại letco.vn.