ಆಗಸ್ಟ್ : ಶಿವಗಿರಿ ಫ್ರೆಂಡ್ಸ್ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್, ಶಿವಗಿರಿ ನಗರ, ನಾರಂಪಾಡಿ ವತಿಯಿಂದ ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ ಬಾಲಕೃಷ್ಣ ಮಾಸ್ಟರ್, ಅಧ್ಯಕ್ಷರು, ಶ್ರೀ ಉಮಾಮಹೇಶ್ವರ ಕ್ಷೇತ್ರ, ನಾರಂಪಾಡಿ ಅವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಕ್ಲಬ್ನ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದು, ದೇಶಭಕ್ತಿಯೊಂದಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರು. ಕಾರ್ಯಕ್ರಮವು ಸಡಗರ ಹಾಗೂ ಗೌರವಪೂರ್ಣ ವಾತಾವರಣದಲ್ಲಿ ನಡೆಯಿತು.

