ದಕ್ಷಿಣ ಕನ್ನಡದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹1.05 ಕೋಟಿ ಮೌಲ್ಯದ MDMA, ಕೊಕೇನ್ ವಶ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾದಕವಸ್ತು ಸಾಗಾಟ ಜಾಲ ಪತ್ತೆಯಾಗಿದೆ. ಓರ್ವ ಆರೋಪಿ ಹಾಗೂ ಒಟ್ಟು ರೂ 1,05,59,450/- ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ನಿನ್ನೆ ರಾತ್ರಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯವರಿಗೆ ಹಾಸನ ಕಡೆಯಿಂದ ಮಂಗಳೂರು ಕಡೆಗೆ ಮಾದಕವಸ್ತು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಕಾರೊಂದನ್ನು ತಡೆದು ವಾಹನ ಚಾಲಕನಾಗಿದ್ದ ಬೆಂಗಳೂರು ಕೆಂಗೇರಿ ನಿವಾಸಿ ಮಹಮ್ಮದ್ ಅಮೀರ್ ಜರ್ತಾಬ್ ಎಂಬಾತನನ್ನು ವಿಚಾರಣೆ ನಡೆಸಿದಾಗ ಆತನು ಕಾರಲ್ಲಿ ಮಾದಕವಸ್ತು ಸಾಗಿಸುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ.

ಕಾರನ್ನು ತಪಾಸಣೆ ನಡೆಸಿದಾಗ ಒಟ್ಟು ಒಟ್ಟು 538.63 ಗ್ರಾಂ MDMA ಮತ್ತು 99.12 ಗ್ರಾಂ ಕೊಕೈನ್ ಹಾಗೂ ಖಾಲಿ ಪ್ಲಾಸ್ಟಿಕ್ ಡಬ್ಬಿಗಳು, ಡಿಜಿಟಲ್ ತೂಕದ ಯಂತ್ರ, ಸೇರಿದಂತೆ‌ಇತರೆ ಸೊತ್ತುಗಳು ಪತ್ತೆಯಾಗಿರುತ್ತದೆ. ಅವುಗಳನ್ನು ವಶಕ್ಕೆ ಪಡೆಯಲಾಗಿದ್ದು, ಮಾದಕ ವಸ್ತುಗಳ ಅಂದಾಜು ಮೌಲ್ಯವು MDMA ₹53,86,300/- ಹಾಗೂ ಕೊಕೈನ್ ₹49,56,000/- ಆಗಿದ್ದು, ಇತರೆ ವಶಪಡಿಸಿಕೊಂಡ ಸ್ವತ್ತುಗಳ ಮೌಲ್ಯ ಸೇರಿದಂತೆ ಒಟ್ಟು ಅಂದಾಜು ಮೌಲ್ಯ ₹1,05,59,450/- ಆಗಿರುತ್ತದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 113/2026, ಕಲಂ: 8(C) r/w 22(C), 21(ಬಿ) NDPS ACT 1985 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!