ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ನಾಲ್ವರು ಮೃತ್ಯು

‘ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಹೆದ್ದಾರಿಯ ಕೊಯನಾಡು ಎಂಬಲ್ಲಿ ಜು.25ರ ಶುಕ್ರವಾರ ನಡೆದಿದೆ. ನಿಹಾದ್, ರಿಸ್ವಾನ್, ರಾಶಿಬ್ ಮತ್ತು ರಿಶು ಮೃತಪಟ್ಟವರು ಎಂದು ಗುರುತಿಸಲಾಗಿದೆ.


ಘಟನೆಯ ಪರಿಣಾಮ ಕಾರಿನಲ್ಲಿದ್ದ ನಾಲ್ವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತದೇಹಗಳನ್ನು ಸುಳ್ಯದ ಆಸ್ಪತ್ರೆಗೆ ತರಲಾಗಿದ್ದು, ಪ್ರಕ್ರಿಯೆಗಳು ನಡೆಯುತ್ತಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮಾಹಿತಿ ಪಡೆಯುತ್ತಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!