ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ ಹಾಗೂ ಶಿವದುರ್ಗಾ ಗ್ರಂಥಾಲಯ ಸಹಯೋಗದಲ್ಲಿ ಸ್ವಾತಂತ್ರ ಶೃಂಗಾರ

ಕಾಸರಗೋಡು:- ಸ್ವಾತಂತ್ರ್ಯ ಹೋರಾಟದಲ್ಲಿ ದೇಶಕ್ಕಾಗಿ ಪ್ರಾಣ ಅರ್ಪಿಸಿದ ಮಹಾನ್ ನಾಯಕರ ಬಲಿದಾನವನ್ನು ನೆನಪಿಟ್ಟುಕೊಂಡು ಅವರ ಆದರ್ಶಗಳನ್ನು ಜೀವನದಲ್ಲಿ ಅನುಸರಿಸುವುದೇ ನಿಜವಾದ ಸ್ವಾತಂತ್ರ್ಯ ಎಂದು ಡಾ. ವೆಂಕಟಗಿರೀಶ್ ಅಭಿಪ್ರಾಯ ವ್ಯಕ್ತಪಡಿಸಿದರು.


ಡಾ. ವಾಣಿಶ್ರೀ ಕಾಸರಗೋಡು ನೇತೃತ್ವದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ) ಕಾಸರಗೋಡು ಹಾಗೂ ಶಿವದುರ್ಗಾ ಗ್ರಂಥಾಲಯ ವತಿಯಿಂದ ಪ್ರಕೃತಿ ಆಯುರ್ವೇದ ಚಿಕಿತ್ಸಾಲಯ ಶ್ರೀ ಗಿರಿ ಸದನ ಚೂರಿಪ್ಪಳ್ಳ ನೆಲ್ಲಿಕಟ್ಟೆ ಇಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಗಸ್ಟ್ 16ರಂದು ಸಂಘದ 241ನೇ ಕಾರ್ಯಕ್ರಮವಾಗಿ “ಸ್ವಾತಂತ್ರ್ಯ ಶೃಂಗಾರ” ಎನ್ನುವ ವಿನೂತನ ಕಾರ್ಯಕ್ರಮ ನಡೆಯಿತು. ಸಂಘದ ಅಧ್ಯಕ್ಷರಾದ ಡಾ. ವಾಣಿಶ್ರೀ ಕಾಸರಗೋಡು ಇವರು ಸ್ವಾತಂತ್ರ್ಯ ಎಂದರೆ ಸ್ವೇಚ್ಛಾಚಾರ ಅಲ್ಲ ಬದಲಾಗಿ ಸ್ವಾಭಿಮಾನ ಎಂದು ಅಭಿಪ್ರಾಯಪಟ್ಟರು. ಪ್ರತಿಯೊಬ್ಬ ಪ್ರಜೆಯೂ ಸ್ವಾಭಿಮಾನದಿಂದ ಗೌರವಯುತವಾಗಿ ಬದುಕಿ ರಾಷ್ಟ್ರದ ಏಕತೆ ಮತ್ತು ಅಖಂಡತೆ ಶ್ರಮಿಸಬೇಕು ಎಂದು ತಮ್ಮ ಮಾತುಗಳಲ್ಲಿ ತಿಳಿಸಿದರು.ಸಂಘದ ಕಾರ್ಯದರ್ಶಿ ಸುರೇಶ್ ಉಡುಪಿ ಕಾರ್ಯಕ್ರಮದ ರೂಪು ರೇಷೆ ಸಿದ್ಧಪಡಿಸಿದರು.ಸಂಘದ ಉಪಾಧ್ಯಕ್ಷ ಶ್ರೀ ಅಚ್ಚುತ ಭಟ್ ಕಾರ್ಯಕ್ರಮ ವ್ಯವಸ್ಥಿತ ರೀತಿಯಲ್ಲಿ ನಡೆಯಲು ಸಹಕರಿಸಿದರು.


ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾಯಿ ಭಾರತಿಗೆ ನೃತ್ಯಗಳ ಮೂಲಕ ನುಡಿ ನಮನ ಸಲ್ಲಿಸಲಾಯಿತು. ದೇಶಭಕ್ತಿ ಗಾಯನ, ಸಮೂಹ ಗಾಯನ, ನೃತ್ಯಗಳು ಸಾಂಸ್ಕೃತಿಕ ಕಾರ್ಯಕ್ರಮದ ವಿಶೇಷ ಆಕರ್ಷಣೆಗಳಾಗಿದ್ದವು. ಕಲಾವಿದರಾದ ಚಂದ್ರಶೇಖರ, ಮಾಲತಿ, ತನ್ವಿಶ್. ಸ್ವಾತಿ, ರತೀಶ್, ದರ್ಶಿ, ಕೃಷ್ಣ ಮುಂತಾದವರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!