ದುರ್ನಾಥ ಬೀರುತ್ತಿರುವ ಕಾರ್ಕಳ ಮಾರುಕಟ್ಟೆ ಪಾರ್ಕಿಂಗ್ : ರಮಿತಾ ಸೂರ್ಯವಂಶಿ ಖಂಡನೇ

ಕಾರ್ಕಳ ಪುರಸಭೆ ವ್ಯಾಪ್ತಿಯ ಮಾರುಕಟ್ಟೆ ಪ್ರದೇಶದಲ್ಲಿ ಸ್ವಚ್ಛತೆ ಹಾಗೂ ನಿರ್ವಹಣೆ ಕೊರತೆಯಿಂದ ದುರ್ವಾಸನೆ ಹರಡುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಆರೋಪಿಸಿದ್ದಾರೆ.

ಮಾರುಕಟ್ಟೆಯ ಪಾರ್ಕಿಂಗ್ ಪ್ರದೇಶ ಸೇರಿದಂತೆ ವಿವಿಧೆಡೆ ತ್ಯಾಜ್ಯ, ಕೊಳೆತ ಮೀನು ಹಾಗೂ ಇತರ ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡದಿರುವುದರಿಂದ ಪರಿಸರ ಅಸ್ವಚ್ಛಗೊಂಡಿದೆ. ಅಲ್ಲದೆ, ಸಮರ್ಪಕ ಶೌಚಾಲಯ ವ್ಯವಸ್ಥೆ ಇಲ್ಲದ ಕಾರಣ ಮಾರುಕಟ್ಟೆ ಪ್ರದೇಶದಲ್ಲೇ ಮೂತ್ರ ವಿಸರ್ಜನೆ ನಡೆಯುತ್ತಿದ್ದು, ಸಾರ್ವಜನಿಕರು ಓಡಾಡಲು ಅಸಹ್ಯಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಾರುಕಟ್ಟೆಯಲ್ಲಿ ಸುಂಕ ವಸೂಲಿ ಮಾಡಲಾಗುತ್ತಿದ್ದರೂ, ಅದಕ್ಕೆ ಅನುಗುಣವಾಗಿ ಸ್ವಚ್ಛತೆ ಮತ್ತು ನಿರ್ವಹಣೆಗೆ ಆದ್ಯತೆ ನೀಡಲಾಗುತ್ತಿಲ್ಲ ಎಂದು ರಮಿತಾ ಸೂರ್ಯವಂಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪುರಸಭೆ ಅಧಿಕಾರಿಗಳು ಕೂಡಲೇ ಮಾರುಕಟ್ಟೆ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಿ, ಸ್ವಚ್ಛತೆ ಹಾಗೂ ಮೂಲಸೌಕರ್ಯ ವ್ಯವಸ್ಥೆಯನ್ನು ಸುಧಾರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮುಂದಿನ ದಿನಗಳಲ್ಲಿಯೂ ಸಮಸ್ಯೆ ಪರಿಹಾರವಾಗದಿದ್ದರೆ ಸಾರ್ವಜನಿಕರನ್ನು ಒಗ್ಗೂಡಿಸಿ ಪುರಸಭೆ ಕಚೇರಿಗೆ ಮುತ್ತಿಗೆ ಹಾಕುವ ಅನಿವಾರ್ಯತೆ ಎದುರಾಗಬಹುದು ಎಂದು ಎಚ್ಚರಿಕೆ ನೀಡಿರುವ ರಮಿತಾ ಸೂರ್ಯವಂಶಿ, ಸಾರ್ವಜನಿಕರ ಸಮಸ್ಯೆಗಳನ್ನು ಅಧಿಕಾರಿಗಳು ನಿರ್ಲಕ್ಷಿಸಬಾರದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!