ಉಡುಪಿ: ಬ್ರಹ್ಮಾವರ ಸಮೀಪ ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಬಸ್ ಭಾಗಶಃ ಸುಟ್ಟುಹೋದ ಘಟನೆ ನಡೆದಿದೆ.

ಬಸ್ಸಿನ ಇಡಿಸಿ ಬಾಕ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ನಿರ್ವಾಹಕರು ಸಮಯಪ್ರಜ್ಞೆ ಮೆರೆದು ಬಸ್ಸಿನಲ್ಲಿದ್ದ ಏಳು ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಇದರಿಂದ ಭಾರೀ ಅನಾಹುತವೊಂದು ತಪ್ಪಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.


[3281]mpo007 | Login Resmi Link Alternatif Situs Slot Gacor RTP Tinggi,mpo007 menyediakan akses link alternatif terbaru dengan pola slot RTP tinggi. Nikmati kemudahan cara deposit via Dana yang cepat. Daftar dan mainkan sekarang juga! visit: mpo007