ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಮಂಗಳೂರು: ಕೆನರಾ ಇಂಜಿನಿಯರಿಂಗ್ ಕಾಲೇಜಿನ ಎನ್ನೆಸ್ಸೆಸ್ , ರೆಡ್ ಕ್ರಾಸ್ ಘಟಕ, ವಿದ್ಯಾರ್ಥಿಗಳ ಇ.ಎಸ್. ಆರ್. ಕ್ಲಬ್ ಹಾಗೂ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಸಹಯೋಗದಲ್ಲಿ ರಕ್ತದಾನ ಶಿಬಿರ ಕಾಲೇಜಿನಲ್ಲಿ ಬುಧವಾರ ನಡೆಯಿತು.


ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಡಾ. ದೀಪಿಕಾ ಹಾಗೂ ಬಳಗದ ಮಾರ್ಗದರ್ಶನ ದಲ್ಲಿ ಬ್ಲಡ್ ಬ್ಯಾಂಕ್ ಮುಖ್ಯಸ್ಥ ಆಂಟನಿ ಡಿ ಸೋಜಾ ಅವರು ರಕ್ತದಾನಿಗಳಿಂದ ರಕ್ತದಾನ ಸಂಗ್ರಹ ಪ್ರಕ್ರಿಯೆಯಲ್ಲಿ ತೊಡಗಿಕೊಂಡರು. ಕಾಲೇಜಿನ ಬೋಧಕರು, ಬೋಧಕೇತರರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದ ಈ ಶಿಬಿರದಲ್ಲಿ 43 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಕಾಲೇಜಿನ ಸಹ ಪ್ರಾಧ್ಯಾಪಕ ಅನಂತಕೃಷ್ಣ ಕಾಮತ್ ಕಾರ್ಯಕ್ರಮದ ಸಮನ್ವಯಕಾರರಾಗಿ ಸಹಕರಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!