ನವದೆಹಲಿ: ಭಯೋತ್ಪಾದಕರಿಗೆ ರಕ್ಷಣೆ ನೀಡಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಳ್ಳಬಾರದು ಎಂದು ಭಾರತ ಕಠಿಣ ಸಂದೇಶ ನೀಡಿದೆ.
ಭದ್ರತಾ ಮಂಡಳಿಯ ಸದಸ್ಯತ್ವವನ್ನು ಸಂಕುಚಿತ ರಾಜಕೀಯ ಹಿತಾಸಕ್ತಿಗಳಿಗಾಗಿ ಬಳಸಬಾರದು. ನಿರ್ಧಾರಗಳು ರಾಜಕೀಯ ಒತ್ತಡದಿಂದಲ್ಲ, ಸ್ಪಷ್ಟ ಸಾಕ್ಷ್ಯಗಳ ಆಧಾರದ ಮೇಲೆ ಕೈಗೊಳ್ಳಬೇಕು ಎಂದು ಭಾರತದ ರಾಯಭಾರಿ ಯೋಜನಾ ಪಟೇಲ್ ಹೇಳಿದ್ದಾರೆ.

ವಿಶ್ವಸಂಸ್ಥೆಯು ಇಂದಿನ ಜಾಗತಿಕ ವಾಸ್ತವಾಂಶಗಳನ್ನು ಪ್ರತಿಬಿಂಬಿಸಬೇಕು. ಭದ್ರತಾ ಮಂಡಳಿಯ ಶಾಶ್ವತ ಹಾಗೂ ತಾತ್ಕಾಲಿಕ ಸದಸ್ಯತ್ವವನ್ನು ವಿಸ್ತರಿಸಿ ಅಭಿವೃದ್ಧಿಶೀಲ ಹಾಗೂ ಜಾಗತಿಕ ದಕ್ಷಿಣದ ರಾಷ್ಟ್ರಗಳಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಭಾರತ ಒತ್ತಾಯಿಸಿದೆ.
ಪಾಕಿಸ್ತಾನ ಮೂಲದ ಭಯೋತ್ಪಾದಕರನ್ನು ಕಪ್ಪುಪಟ್ಟಿಗೆ ಸೇರಿಸುವ ಪ್ರಸ್ತಾವನೆಗಳಿಗೆ ಚೀನಾ ಹಲವು ಬಾರಿ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆ, ಭಾರತದ ಈ ಹೇಳಿಕೆ ಮಹತ್ವ ಪಡೆದಿದೆ.




Perfect timing on this. There’s a job board over at https://hvae.apps-cn-lanjingsports.com/ that has saved me hours. It aggregates vacancies across nearly every city, and the thing I like is how fast the search is.