ಮಂಗಳೂರು:SCS ಆಸ್ಪತ್ರೆಯಲ್ಲಿ ರೋಗಿಯಿಂದ ಹೆಚ್ಚಿನ ಶುಲ್ಕ ವಸೂಲಿ ಹಾಗೂ ಡಿಸ್ಚಾರ್ಜ್ಗೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ರೋಗಿಯ ಸಂಬಂಧಿಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದು, ವೈರಲ್ ಆಗಿದೆ.

ಕೈನೋವಿನ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ಸಂಜೆ ಆರ್ಥೋಪೆಡಿಕ್ ವೈದ್ಯರು ಚಿಕಿತ್ಸೆ ನೀಡಲಿದ್ದಾರೆ ಎಂದು ತಿಳಿಸಲಾಗಿತ್ತು. ಆದರೆ ರಾತ್ರಿ 10 ಗಂಟೆಯಾದರೂ ವೈದ್ಯರು ಆಗಮಿಸಿಲ್ಲ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಡಿಸ್ಚಾರ್ಜ್ ಕೇಳಿದಾಗ ಹೆಚ್ಚುವರಿ ಬಿಲ್ ಪಾವತಿಸುವಂತೆ ಒತ್ತಾಯಿಸಲಾಗುತ್ತಿದೆ ಎಂದು ಅವರು ದೂರಿದ್ದಾರೆ. ಈ ಕುರಿತು ಲೂಯಿಸ್ ಮೊಂತೆರೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿ, ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಆದರೆ ಆರೋಪಗಳ ಕುರಿತು ಆಸ್ಪತ್ರೆ ಆಡಳಿತ ಮಂಡಳಿಯಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಿಲ್ಲ. ಘಟನೆ ಬಗ್ಗೆ ಆರೋಗ್ಯ ಇಲಾಖೆ ತನಿಖೆ ನಡೆಸಬೇಕು ಎಂಬ ಆಗ್ರಹ ಕೇಳಿಬಂದಿದೆ.

