ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವೇಣೂರು ನಿವಾಸಿ ಜಮಾಲುದ್ದೀನ್ ಎಂಬಾತನನ್ನು ವೇಣೂರು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪೊಲೀಸರ ಪ್ರಕಾರ, 14 ವರ್ಷದ ಬಾಲಕಿ ಕೆಲವು ತಿಂಗಳುಗಳಿಂದ ಆರೋಪಿಯ ರಿಕ್ಷಾದಲ್ಲಿ ಶಾಲೆಗೆ ತೆರಳಿ ಬರುತ್ತಿದ್ದಳು. ಈ ವೇಳೆ ಆರೋಪಿ ಅನುಚಿತವಾಗಿ ವರ್ತಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಬಾಲಕಿ ಇದಕ್ಕೆ ಪ್ರತಿರೋಧಿಸಿದಾಗ ಜೀವ ಬೆದರಿಕೆ ಹಾಕಿದ್ದರಿಂದ ಭಯಗೊಂಡು ಯಾರಿಗೂ ವಿಷಯ ತಿಳಿಸಿರಲಿಲ್ಲ ಎನ್ನಲಾಗಿದೆ.

ಆಗಸ್ಟ್ 13ರಂದು ಸಂಜೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಆರೋಪಿ ಮನೆಗೆ ಬಂದು ಬೆದರಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿ ಆಗಸ್ಟ್ 15ರಂದು ನೀಡಿದ ದೂರಿನಲ್ಲಿ ಆರೋಪಿಸಿದ್ದಾಳೆ.
ದೂರಿನ ಆಧಾರದ ಮೇಲೆ ವೇಣೂರು ಪೊಲೀಸ್ ಠಾಣಾ ಅ.ಕ್ರ: 56/2026 ಕಲಂ: 75(2), 64(1), 65(1), 351(3) BNS 2023 ಮತ್ತು ಕಲಂ: 4(2), 8, 12 ಪೋಕ್ಸೋ ಕಾಯಿದೆ- 2012 ರಂತೆ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ದಿನಾಂಕ ದಿನಾಂಕ 15.08.2026 ರಂದು ವಶಕ್ಕೆ ಪಡೆದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.



