ಮಂಗಳೂರು ನಗರದ ಫಳ್ನೀರ್ನಲ್ಲಿರುವ ಎಂಎಫ್ಸಿ ಕೆಫೆಗೆ ಆಹಾರ ಸುರಕ್ಷತಾ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಕ್ಯೂಆರ್ಕೋಡ್ ಮೂಲಕ ದೂರಿಗೆ ತಕ್ಷಣ ಸ್ಪಂದಿಸಿದ ಅಧಿಕಾರಿಗಳು ಕೆಫೆಗೆ ಭೇಟಿ ನೀಡಿ ಆಹಾರದ ಗುಣಮಟ್ಟ, ನೈರ್ಮಲ್ಯ ಹಾಗೂ ಆಹಾರ ಸಂಗ್ರಹಣೆಯ ಕುರಿತು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ನಗರದ ಕೆಎಫ್ಸಿ ಕೆಫೆಗೆ ಅಧಿಕಾರಿಗಳು ದಾಳಿ ನಡೆಸಿ ಗಮನ ಸೆಳೆದಿದ್ದರು.

ಅದರಂತೆ ಇಂದು ಕ್ಯೂಆರ್ ಕೋಡ್ ಮೂಲಕ ಬಂದ ದೂರಿನ ಅನ್ವಯ ನಗರದ ಪಳ್ನೀರ್ ರಸ್ತೆಯಲ್ಲಿರುವ ಎಂಎಫ್ಸಿ ಕೆಫೆಗೆ ದಾಳಿ ನಡೆಸಿದ ಅಧಿಕಾರಿಗಳು ಅಡುಗೆಮನೆ ಸಹಿತ ವಿವಿಧೆಡೆ ತಪಾಸಣೆ ನಡೆಸಿದ್ದಾರೆ. ಆಹಾರ ಸುರಕ್ಷತಾ ನಿಯಮಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿದ್ದಾರೆ.

