ಆಗಸ್ಟ್ 23ರಂದು ಗುರುಪುರದಲ್ಲಿ ಮಡಿವಾಳ ಸಮಾಜದ ಕೆಸರುಗದ್ದೆ ಕಾರ್ಯಕ್ರಮ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಸಂಘ, ರಜಕ ಯೂತ್, ಮಹಿಳಾ ಘಟಕ ಕುಡ್ಲ ಹಾಗೂ ಸರ್ವ ತಾಲೂಕು ಸಂಘಗಳ ಆಶ್ರಯದಲ್ಲಿ, ಸೇವಾ ಬ್ರಿಗೇಡ್ ಗುರುಪುರ ಸಹಕಾರದೊಂದಿಗೆ ಮಡಿವಾಳ ಸಮಾಜದವರಿಗಾಗಿ ‘ಕೆಸರ್ ದ ಕಂಡಡೊಂಜಿ ದಿನ’ ಕಾರ್ಯಕ್ರಮ ಆಗಸ್ಟ್ 23ರಂದು ಗುರುಪುರ ಕುಕ್ಕುದಕಟ್ಟೆಯ ಶ್ರೀ ವೈದ್ಯನಾಥ ದೈವಸ್ಥಾನದ ಬಂಡಿಗದ್ದೆಯಲ್ಲಿ ನಡೆಯಲಿದೆ.

ಗ್ರಾಮೀಣ ಬದುಕು, ಕೃಷಿ ಸಂಸ್ಕೃತಿ ಹಾಗೂ ಸಮಾಜದ ಒಗ್ಗಟ್ಟನ್ನು ಪ್ರತಿಬಿಂಬಿಸುವ ರೀತಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮಡಿವಾಳ ಸಮಾಜದ ಕುಟುಂಬಗಳು, ಯುವಕರು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಬೆಳಗ್ಗೆ 9.30ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಸಂಘದ ಅಧ್ಯಕ್ಷ ಮೋಹನ ಅಳಪೆ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಮಡಿವಾಳರ ಸಂಘದ ಪ್ರಕಾಶ್ ಬಿ.ಎನ್., ದೋಣಿಂಜೆಗುತ್ತಿನ ಪ್ರಧಾನ ಗಡಿಕಾರ ಪ್ರಮೋದ್ ಕುಮಾರ್ ರೈ ದೋಣಿಂಜೆಗುತ್ತು, ಮೂಳೂರು ಶ್ರೀ ಮುಂಡಿತ್ತಾಯ ದೈವಸ್ಥಾನದ ಆಡಳಿತ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ದೋಣಿಂಜೆಗುತ್ತು, ದೈವಸ್ಥಾನದ ದರ್ಶನ ಪಾತ್ರಿಗಳಾದ ಚಂದ್ರಹಾಸ ಕೌಡೂರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.

ಉದ್ಯಮಿಗಳಾದ ಡಾ. ಸರಳಾ ಆರ್., ಸದಾನಂದ ಪುತ್ರನ್, ರಾಮಕೃಷ್ಣ ವಾಮಂಜೂರು, ಮೆಸ್ಕಾಂ ಅಧಿಕಾರಿ ಗಣೇಶ್ ಕುಂದರ್ ಹಾಗೂ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್ ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಕೆಸರುಗದ್ದೆಯಲ್ಲಿ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿವೆ. ಯುವಕರು, ಮಹಿಳೆಯರು ಹಾಗೂ ಸಮಾಜದ ಸದಸ್ಯರು ಉತ್ಸಾಹದಿಂದ ಪಾಲ್ಗೊಳ್ಳುವಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಇದರ ಜೊತೆಗೆ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. ಸಮಾಜದ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಕಾರ್ಯಕ್ರಮದಲ್ಲಿ ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ.
ಮಡಿವಾಳ ಸಮಾಜದ ಸದಸ್ಯರಲ್ಲಿ ಸಾಮಾಜಿಕ ಬಾಂಧವ್ಯ, ಒಗ್ಗಟ್ಟು ಹಾಗೂ ಸಾಂಸ್ಕೃತಿಕ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಸಮಾಜದವರು ಕುಟುಂಬ ಸಮೇತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.

SHARE
Loading spinner

One thought on “ಆಗಸ್ಟ್ 23ರಂದು ಗುರುಪುರದಲ್ಲಿ ಮಡಿವಾಳ ಸಮಾಜದ ಕೆಸರುಗದ್ದೆ ಕಾರ್ಯಕ್ರಮ

Leave a Reply

Your email address will not be published. Required fields are marked *

error: Content is protected !!