ಚಲಿಸುತ್ತಿದ್ದ ಒಕ್ಕಾ ಎಕ್ಸ್‌ಪ್ರೆಸ್‌ನಲ್ಲಿ ಮಹಿಳೆಯರೊಂದಿಗೆ ಅಸಭ್ಯ ವರ್ತನೆ; 53ರ ಹರೆಯದ ವ್ಯಕ್ತಿ ಬಂಧನ

​ಕಾಸರಗೋಡು: ಚಲಿಸುತ್ತಿದ್ದ ಒಕ್ಕಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಹಿಳಾ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಚೇಷ್ಟೆ ನಡೆಸಿದ ಮಧ್ಯವಯಸ್ಕ ವ್ಯಕ್ತಿಯನ್ನು ಕಾಸರಗೋಡು ರೈಲ್ವೇ ಪೊಲೀಸರು ಬಂಧಿಸಿದ್ದಾರೆ.

ಕಣ್ಣೂರು ಜೋಸ್‌ಗಿರಿ ನಿವಾಸಿ ಜೋಸ್ ಮ್ಯಾಥ್ಯು (53) ಬಂಧಿತ ಆರೋಪಿ.
​ ಶನಿವಾರ ಮುಂಜಾನೆ ಕಾಸರಗೋಡು ರೈಲು ನಿಲ್ದಾಣಕ್ಕೆ ರೈಲು ಬಂದ ತಕ್ಷಣ, ಆರೋಪಿ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ತಕ್ಷಣ ಎಚ್ಚೆತ್ತ ಯುವತಿಯೊಬ್ಬರು ಪೊಲೀಸ್ ಕಂಟ್ರೋಲ್ ರೂಮ್‌ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

​ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ವಶಕ್ಕೆ ತೆಗೆದುಕೊಂಡರು

. ಬಳಿಕ ಆತನನ್ನು ರೈಲಿನಿಂದ ಕೆಳಗೆ ಇಳಿಸಿ ಠಾಣೆಗೆ ಕರೆದೊಯ್ದು, ಕಾನೂನು ಪ್ರಕ್ರಿಯೆಯಂತೆ ನೋಟೀಸ್ ಜಾರಿಗೊಳಿಸಿ ಬಿಡುಗಡೆ ಮಾಡಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!