ಪುತ್ತೂರು: ವಾಹನ ಚಾಲನೆಗೆ ಅಡ್ಡಿಯಾಗುವ ರೀತಿಯಲ್ಲಿ ಗ್ಲಾಸ್‌ಗಳಿಗೆ ಸ್ಟಿಕ್ಕರ್ ಅಳವಡಿಸಿ ಹಾಗೂ ವಾಹನದ ನೋಂದಣಿ ಸಂಖ್ಯೆಯನ್ನು ಮರೆಮಾಚುವಂತೆ ಸ್ಟಿಕ್ಕರ್ ಹಾಕಿಕೊಂಡು ಸಂಚರಿಸುತ್ತಿದ್ದ ವಾಹನಗಳ ವಿರುದ್ಧ ಪುತ್ತೂರು ಸಂಚಾರ ಠಾಣೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.ಸಂಚಾರ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನಗಳನ್ನು ತಪಾಸಣೆ ನಡೆಸಿದ ಪೊಲೀಸರು, ಅಂತಹ ವಾಹನಗಳಿಗೆ ದಂಡ ವಿಧಿಸಿದ್ದಾರೆ.

ಸಾರ್ವಜನಿಕರು ಯಾವುದೇ ಉತ್ಸವ, ಹಬ್ಬ-ಹರಿದಿನಗಳು ಹಾಗೂ ಇತರ ಕಾರ್ಯಕ್ರಮಗಳ ನೆಪದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಬಾರದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ವಾಹನಗಳ ಗ್ಲಾಸ್‌ಗಳಿಗೆ ಚಾಲನೆಗೆ ಅಡ್ಡಿಯಾಗುವ ರೀತಿಯಲ್ಲಿ ಸ್ಟಿಕ್ಕರ್ ಅಳವಡಿಸುವುದು ಹಾಗೂ ನೋಂದಣಿ ಸಂಖ್ಯೆಯನ್ನು ಮರೆಮಾಚುವಂತಹ ಕ್ರಮಗಳನ್ನು ಕೈಗೊಂಡು ಸಂಚರಿಸಿದರೆ, ಅಂತಹ ವಾಹನಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪುತ್ತೂರು ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.


