ಮಂಜೇಶ್ವರ:ವಿಶ್ವ ಹಿಂದೂ ಪರಿಷದ್ ಮಾತೃ ಮಂಡಳಿ ಮಂಜೇಶ್ವರ ವತಿಯಿಂದ 41ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ವ್ರತಾಚರಣೆ ಧಾರ್ಮಿಕ ಭಕ್ತಿಭಾವದೊಂದಿಗೆ ಇಂದು ಹೊಸಂಗಡಿಯ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ನಡೆಯಿತು.
ವರಮಹಾಲಕ್ಷ್ಮಿ ವ್ರತದ ಅಂಗವಾಗಿ ಬೆಳಗ್ಗಿನಿಂದಲೇ ಕ್ಷೇತ್ರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಬೆಳಗ್ಗೆ 9.30ಕ್ಕೆ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ವ್ರತಾಚರಣೆಯಲ್ಲಿ ಭಾಗವಹಿಸಿದ ಮಹಿಳಾ ಭಕ್ತರು ಭಕ್ತಿಶ್ರದ್ಧೆಯಿಂದ ವಿಶೇಷ ಪೂಜಾ ವಿಧಿಗಳನ್ನು ನೆರವೇರಿಸಿದರು. ಕುಟುಂಬದ ಸುಖ, ಶಾಂತಿ, ಸಮೃದ್ಧಿ ಹಾಗೂ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಮಹಿಳೆಯರು ವಿಶೇಷವಾಗಿ ವರಮಹಾಲಕ್ಷ್ಮಿ ವ್ರತವನ್ನು ಆಚರಿಸಿದರು.

ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನೆರವೇರಿಸಲಾಯಿತು. ಮಹಾಪೂಜೆಯ ಸಂದರ್ಭದಲ್ಲಿ ಕ್ಷೇತ್ರದಲ್ಲಿ ಭಕ್ತಿಭಾವದ ವಾತಾವರಣ ನಿರ್ಮಾಣವಾಗಿದ್ದು, ಅಪಾರ ಸಂಖ್ಯೆಯಲ್ಲಿ ಮಹಿಳೆಯರು ಸೇರಿದಂತೆ ಭಕ್ತರು ಪಾಲ್ಗೊಂಡು ದೇವಿಯ ಅನುಗ್ರಹವನ್ನು ಪಡೆದರು.

ಮಹಾಪೂಜೆಯ ಬಳಿಕ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ನಂತರ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.
ಪ್ರತಿವರ್ಷದಂತೆ ಈ ಬಾರಿಯೂ ವಿಶ್ವ ಹಿಂದೂ ಪರಿಷದ್ ಮಾತೃ ಮಂಡಳಿ ಮಂಜೇಶ್ವರದ ವತಿಯಿಂದ ಆಯೋಜಿಸಲಾದ ಶ್ರೀ ವರಮಹಾಲಕ್ಷ್ಮಿ ವ್ರತಾಚರಣೆಯಲ್ಲಿ ಅನೇಕ ಸಂಖ್ಯೆಯಲ್ಲಿ ಮಹಿಳಾ ಭಕ್ತರು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವವನ್ನು ಹೊಂದಿರುವ ಈ ವ್ರತಾಚರಣೆಯು ಭಕ್ತರ ಪಾಲಿಗೆ ಶ್ರದ್ಧೆ ಮತ್ತು ಭಕ್ತಿಯ ಸಂಗಮವಾಗಿ ಮೂಡಿಬಂದಿತು.




Really impressed with the variety of games here. It feels very secure and the bonuses are actually generous. Big thanks to krsos888.