ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬಾರದು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಆಗ್ರಹಿಸಿದರು.

ನಗರದ ಮನಪಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವರದಿಯ ಸಾಧಕ-ಬಾಧಕಗಳ ಕುರಿತು ಸಮಗ್ರ ಚರ್ಚೆ ನಡೆಸಿದ ಬಳಿಕವೇ ತೀರ್ಮಾನ ಕೈಗೊಳ್ಳಬೇಕು. ಸ್ಥಳೀಯ ಜನರ ಅಭಿಪ್ರಾಯ, ಕೃಷಿ, ತೋಟಗಾರಿಕೆ, ಗ್ರಾಮೀಣ ವಸತಿ ಹಾಗೂ ಜೀವನೋಪಾಯವನ್ನು ಪರಿಗಣಿಸದೆ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳಬಾರದು ಎಂದರು.

ಕರ್ನಾಟಕದ 10 ಜಿಲ್ಲೆಗಳ 33 ತಾಲೂಕುಗಳು ಹಾಗೂ 1,533 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ 20,668 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿರುವುದರಿಂದ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ಕಾರ್ಕಳ ಸೇರಿದಂತೆ ಕರಾವಳಿ ಭಾಗದ ಅಡಿಕೆ, ರಬ್ಬರ್ ಹಾಗೂ ಇತರ ತೋಟಗಾರಿಕಾ ಪ್ರದೇಶಗಳನ್ನು ಕೇವಲ ಏರಿಯಲ್ ಸರ್ವೆ ಆಧರಿಸಿ ಅರಣ್ಯ ಅಥವಾ ಸೂಕ್ಷ್ಮ ವಲಯವೆಂದು ಪರಿಗಣಿಸಬಾರದು. ಇದರಿಂದ ಮನೆ ನಿರ್ಮಾಣ, ಕೃಷಿ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ತೊಂದರೆಯಾಗಲಿದೆ ಎಂದರು.
ವಿಷಯದ ಕುರಿತು ಮುಖ್ಯಮಂತ್ರಿ ಅವರನ್ನು ಕರಾವಳಿ ಭಾಗದ ಶಾಸಕರೊಂದಿಗೆ ಭೇಟಿ ಮಾಡಿ ಮನವಿ ಮಾಡಲಾಗಿದೆ. ವಿಶೇಷ ಅಧಿವೇಶನ ಕರೆದು ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಅಲ್ಲಿಯವರೆಗೆ ಅರಣ್ಯಾಧಿಕಾರಿಗಳು ಜನರ ಕೃಷಿ, ತೋಟಗಾರಿಕೆ, ಮನೆ ನಿರ್ಮಾಣ ಹಾಗೂ ಅಭಿವೃದ್ಧಿ ಚಟುವಟಿಕೆಗಳಿಗೆ ತೊಂದರೆ ನೀಡದಂತೆ ನಿರ್ದೇಶನ ನೀಡಬೇಕು ಎಂದು ಐವನ್ ಡಿ’ಸೋಜಾ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಭಾಸ್ಕರ್ ರಾವ್, ಸತೀಶ್ ಪೆಂಗಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


The customer support is top-notch and they solved my issue in minutes. It’s hard to find such professional service these days. Love idzoom188.