ಮಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯನ್ನು ಸೆಪ್ಟೆಂಬರ್ 18, 2026ರಂದು ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಈ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಂಬಂಧಿಸಿದ ಪ್ರಸ್ತಾವನೆಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು.

ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಸಂಬಂಧಿಸಿದ ಅಗತ್ಯ ಪ್ರಸ್ತಾವನೆಗಳನ್ನು ತಕ್ಷಣ ಸಿದ್ಧಪಡಿಸಿ, ಸಚಿವ ಸಂಪುಟದ ಮುಂದೆ ಮಂಡಿಸಲು ಬೇಕಾದ ಸಚಿವ ಸಂಪುಟ ಟಿಪ್ಪಣಿಗಳನ್ನು ರೂಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಕರಾವಳಿ ಭಾಗದ ಅಭಿವೃದ್ಧಿ, ಮೂಲಸೌಕರ್ಯ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಪ್ರಮುಖ ಯೋಜನೆಗಳನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅನುಮೋದನೆ ಪಡೆಯುವ ಉದ್ದೇಶ ಹೊಂದಲಾಗಿದೆ.

