ಮಂಗಳೂರು: ಸಂತ ಆಗ್ನೆಸ್ ಕಾಲೇಜು (ಸ್ವಾಯತ್ತ) ಪದವಿ ವಿಭಾಗದ ವತಿಯಿಂದ ಪದವಿಪೂರ್ವ ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಒಂದು ದಿನದ ರಾಷ್ಟ್ರೀಯ ಮಟ್ಟದ ಅಂತರ್‌ಕಾಲೇಜು ಉತ್ಸವ ‘AIKYAM-2026’ ಸೆಪ್ಟೆಂಬರ್ 17ರಂದು ನಡೆಯಲಿದೆ.

ಉತ್ಸವದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ, ಸೃಜನಶೀಲತೆ ಹಾಗೂ ವೃತ್ತಿಪರ ಕೌಶಲ್ಯಗಳನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗಿದ್ದು, ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಕೌಶಲ್ಯಾಧಾರಿತ ವಿವಿಧ ಸ್ಪರ್ಧೆಗಳು ಆಯೋಜಿಸಲಾಗಿವೆ.

ಸ್ಪರ್ಧೆಯಲ್ಲಿ ಭಾಗವಹಿಸಲು ನೋಂದಾಯಿಸಿಕೊಳ್ಳಲು ಸೆಪ್ಟೆಂಬರ್ 10 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ aikyam2627@gmail.com ಸಂಪರ್ಕಿಸುವಂತೆ ಉತ್ಸವದ ಸಂಯೋಜಕಿ ಡಾ. ಮೀರಾದೇವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

