ಗುವೇದಪಡ್ಪು : ಕೇರಳದ ನಾದಹಬ್ಬವಾದ ಓಣಂ ಹಬ್ಬವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಪ್ರೇರಣಾ ಸಾರ್ವಜನಿಕ ಗ್ರಂಥಾಲಯ (ರಿ ) ಗುವೇದಪಡ್ಪು ನಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಹೂವಿನ ರಂಗೋಲಿ ಹಾಗೂ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು.


ಕಾರ್ಯಕ್ರಮದ ಉದ್ಘಾಟನೆ ಯನ್ನು ಸಾಮಾಜಿಕ ಕಾರ್ಯಕರ್ತೆ ಆಶಾ ವರ್ಕರ್ ಜಮೀಲಾ ಗುವೇದಪಡ್ಪು ನೆರವೇರಿಸಿದರು. ಗ್ರಂಥಾಲಯದ ಅಧ್ಯಕ್ಷರಾದ ಜಯರಾಮ ಕೊಣಿಬೈಲ್ ರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಚೈತ್ರ ಟೀಚರ್, ರುಬೀನಾ ಟೀಚರ್, ಸರಸ್ವತಿ ಕೊಣಿಬೈಲ್, ಮಾಧವ ಪರಂದಳ, ರತೀಶ್ ಕಾನ,ಲಾವಣ್ಯ, ಆಶಾಲತಾ ಮೊದಲಾದವರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಂಗವಾಗಿ ಜರಗಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಗ್ರಂಥಾಲಯ ಕಾರ್ಯದರ್ಶಿ ಅಶೋಕ್ ಕೊಡ್ಲಮೊಗರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಗ್ರಂಥಪಾಲಕಿ ಜಯಶ್ರೀ ವಂದಿಸಿದರು.


I was struggling to find a reliable spot until I tried this. The interface is super smooth and easy to navigate. Glad I found rotowirelogin.