ಆರೋಗ್ಯ ಇಲಾಖೆಯಲ್ಲಿ ಸಾಮಾನ್ಯ ವರ್ಗಾವಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಆದೇಶ

ತಿರುವನಂತಪುರಂ: ಆರೋಗ್ಯ ಇಲಾಖೆಯಲ್ಲಿ ನಡೆಯುವ ಸಾಮಾನ್ಯ ವರ್ಗಾವಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಇನ್ನು ಮುಂದೆ ಆಡಳಿತಾತ್ಮಕ ವರ್ಗಾವಣೆಗಳು ಹಾಗೂ ಬಡ್ತಿ ಆಧಾರಿತ ನೇಮಕಾತಿಗಳನ್ನು ಮಾತ್ರ ನಡೆಸಿದರೆ ಸಾಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಮುಂದಿನ ಆದೇಶ ಹೊರಬರುವವರೆಗೆ ಸಾಮಾನ್ಯ ವರ್ಗಾವಣೆಗಳನ್ನು ಸ್ಥಗಿತಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಆಸ್ಪತ್ರೆಗಳ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಪ್ರಸ್ತುತ ಸಾಮಾನ್ಯ ವರ್ಗಾವಣೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗೆ ಪ್ರಧಾನ ಕಾರ್ಯದರ್ಶಿ ಈ ನಿರ್ದೇಶನ ನೀಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!