200 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ನಡೆಸಿದ್ದಾನೆ ಎನ್ನಲಾದ ಬಹುಕೋಟಿ ವಂಚಕ ರೋಶನ್ ಸಲ್ದಾನ ಪ್ರಕರಣದಲ್ಲಿ ಹೈಕೋರ್ಟ್ ಆರೋಪಿಗೆ ಬಿಗ್ ರಿಲೀಫ್

ಬಿಹಾರದ ಉದ್ಯಮಿಗೆ ಹತ್ತು ಕೋಟಿ ವಂಚನೆ ಮತ್ತು ಮಂಗಳೂರಿನ ವ್ಯಕ್ತಿಗೆ ಒಂದೂವರೆ ಕೋಟಿ ವಂಚನೆ ಪ್ರಕರಣದಲ್ಲಿ ಹೈಕೋರ್ಟ್ ಪೊಲೀಸರ ತನಿಖಾ ಪ್ರಕ್ರಿಯೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಇತ್ತೀಚೆಗೆ ಸಾಲ ನೀಡುವ ನೆಪದಲ್ಲಿ ಭಾರೀ ವಂಚನೆ ನಡೆಸಿದ ಜಾಲದಲ್ಲಿ ಮಂಗಳೂರಿನ ಜೆಪ್ಪಿನಮೊಗರಿನಲ್ಲಿ ರೋಶನ್ ಸಲ್ದಾನ ಎಂಬಾತನನ್ನು ಸಿಇಎನ್ ಪೊಲೀಸರು ಬಂಧಿಸಿದ್ದರು. ಆತನ ಬಂಧನ ವಿಚಾರ ದೇಶಾದ್ಯಂತ ಸುದ್ದಿಯಾಗುತ್ತಿದ್ದಂತೆ ಹಲವಾರು ಉದ್ಯಮಿಗಳು ತಮಗೆ ವಂಚನೆ ನಡೆಸಿರುವ ಬಗ್ಗೆ ದೂರು ನೀಡಲು ಮುಂದೆ ಬಂದಿದ್ದರು. ಬಿಹಾರ ಮೂಲದ ಉದ್ಯಮಿ ತನಗೆ ಹತ್ತು ಕೋಟಿ ವಂಚನೆ ಎಸಗಿದ್ದಾನೆಂದು ದೂರು ನೀಡಿದ್ದರು. ಅಸ್ಸಾಂ ಮತ್ತು ಮಹಾರಾಷ್ಟ್ರ ಮೂಲದ ವ್ಯಕ್ತಿಗಳೂ 5 ಕೋಟಿಯಂತೆ ವಂಚನೆ ಎಸಗಿದ್ದಾಗಿ ದೂರು ನೀಡಿದ್ದರು. ಅದಕ್ಕೂ ಮೊದಲೇ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬರು ಒಂದೂವರೆ ಕೋಟಿ ವಂಚಿಸಿದ್ದ ಬಗ್ಗೆ ದೂರು ನೀಡಿದ್ದರು.

ಮಂಗಳೂರಿನಲ್ಲಿ ದಾಖಲಾದ ಎರಡು ದೂರನ್ನು ಆಧರಿಸಿ ಪೊಲೀಸರು ಆರೋಪಿ ರೋಶನ್ ಸಲ್ಮಾನ ವಿರುದ್ಧ ಕಾರ್ಯಾಚರಣೆ ನಡೆಸಿ ಆತನ ಮನೆಯಲ್ಲೇ ಬಂಧಿಸಿದ್ದರು. ಬಂಧನ ಸಂದರ್ಭದಲ್ಲಿ ತನ್ನ ಮನೆಯನ್ನು ಐಷಾರಾಮಿಯಾಗಿ ತೋರಿಸುತ್ತಿದ್ದುದು, ಮನೆಯ ಒಳಗಡೆಯೇ ವಿದೇಶಿ ಮದ್ಯವನ್ನೊಳಗೊಂಡ ಬಾರ್ ಅಂಡ್ ರೆಸ್ಟೋರೆಂಟ್ ರೀತಿ ಮಾಡಿರುವುದು ಪತ್ತೆಯಾಗಿತ್ತು. ಅಲ್ಲದೆ, ಮಲೇಶ್ಯನ್ ಯುವತಿಯನ್ನೂ ಜೊತೆಗೆ ಇಟ್ಟುಕೊಂಡಿರುವುದು ಕಂಡುಬಂದಿತ್ತು. ಆನಂತರ, ಮಂಗಳೂರಿನ ಸಿಜೆಎಂ ಕೋರ್ಟಿನಲ್ಲಿ ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದರೂ, ಬೆನ್ನು ಬೆನ್ನಿಗೆ ದೂರು ದಾಖಲಾಗಿದ್ದರಿಂದ ಜಾಮೀನು ಸಿಕ್ಕಿರಲಿಲ್ಲ. ಈ ನಡುವೆ, ಹೈಕೋರ್ಟ್ ಮೂಲಕ ಎರಡು ಪ್ರಕರಣಗಳಿಗೆ ತಡೆಯಾಜ್ಞೆ ತರಲಾಗಿದ್ದು, ಪೊಲೀಸರ ತನಿಖೆಗೆ ಹಿನ್ನಡೆ ಉಂಟಾಗಿದೆ. ಮಂಗಳೂರಿನಲ್ಲಿ ರೋಶನ್ ಸಲ್ಮಾನ ಪರವಾಗಿ ಹಿರಿಯ ಕ್ರಿಮಿನಲ್‌ ವಕೀಲ ಅರುಣ್ ಬಂಗೇರ ವಕಾಲತ್ತು ನಡೆಸುತ್ತಿದ್ದಾರೆ.

ರೋಶನ್ ವಿರುದ್ಧ ಕರ್ನಾಟಕ ಮಾತ್ರವಲ್ಲದೆ ಹೊರ ರಾಜ್ಯದ ಉದ್ಯಮಿಗಳೂ ಪ್ರಕರಣ ದಾಖಲಿಸಿರುವುದರಿಂದ ಹೆಚ್ಚುವರಿ ಕೇಸನ್ನು ದಾಖಲಿಸುವುದಕ್ಕೂ ಅವಕಾಶ ಇದೆ. ಪೊಲೀಸರು ಆರೋಪಿಗೆ ಜಾಮೀನು ಸಿಗದಂತೆ ಮಾಡಲು ತಯಾರಿ ನಡೆಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!