ಅನಧಿಕೃತ ಬೀದಿಬದಿ ವ್ಯಾಪಾರ ತೆರವಿಗೆ ಮಹಾನಗರಪಾಲಿಕೆ ಸೂಚನೆ

ಮಂಗಳೂರು, ಸೆ. 2: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳು, ಪಾದಚಾರಿ ಮಾರ್ಗಗಳು ಹಾಗೂ ಇತರ ಪ್ರದೇಶಗಳಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಬೀದಿಬದಿ ವ್ಯಾಪಾರದಿಂದ ವಾಹನ ಸಂಚಾರ ಹಾಗೂ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಇಂತಹ ವ್ಯಾಪಾರವನ್ನು ತೆರವುಗೊಳಿಸುವಂತೆ ಮಹಾನಗರಪಾಲಿಕೆ ಸೂಚಿಸಿದೆ.

ಈ ಕುರಿತು ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳಿಂದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲು ಮುಂದಾಗಿರುವ ಪಾಲಿಕೆ, ಈಗಾಗಲೇ ಮಹಾನಗರಪಾಲಿಕೆಯಿಂದ ಬೀದಿಬದಿ ವ್ಯಾಪಾರದ ಗುರುತಿನ ಚೀಟಿ ಹಾಗೂ ವ್ಯಾಪಾರ ಪ್ರಮಾಣಪತ್ರ ಪಡೆದಿರುವ ವ್ಯಾಪಾರಿಗಳನ್ನು ಹೊರತುಪಡಿಸಿ, ಇತರರು ಅನಧಿಕೃತವಾಗಿ ವ್ಯಾಪಾರ ನಡೆಸುತ್ತಿದ್ದರೆ ಸ್ವಯಂಪ್ರೇರಿತವಾಗಿ ತೆರವುಗೊಳಿಸುವಂತೆ ಸೂಚಿಸಿದೆ.

ಅನಧಿಕೃತ ಬೀದಿಬದಿ ವ್ಯಾಪಾರವನ್ನು ತೆರವುಗೊಳಿಸದೆ ಮುಂದುವರಿಸಿದಲ್ಲಿ, ಬೀದಿಬದಿ ವ್ಯಾಪಾರಿಗಳ ಕಾಯ್ದೆಯನ್ವಯ ಕಾನೂನು ಕ್ರಮ ಕೈಗೊಂಡು ತೆರವುಗೊಳಿಸಲಾಗುವುದು ಎಂದು ಮಂಗಳೂರು ಮಹಾನಗರಪಾಲಿಕೆ ವಲಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರ ಹಿತಾಸಕ್ತಿ ಹಾಗೂ ಸುಗಮ ವಾಹನ ಸಂಚಾರಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪಾಲಿಕೆ ಸ್ಪಷ್ಟಪಡಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!