ಖರ್ಗೆ ಅವಮಾನ ಪ್ರಕರಣ: ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ಖಂಡನೀಯ: ದಿನೇಶ್ ಮುಳೂರು

ಮಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಮಾನ ಮಾಡಿದ ಆರೋಪದ ಕುರಿತು ಕ್ರಮ ಕೈಗೊಳ್ಳುವ ಬದಲು ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಖಂಡನೀಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ದಿನೇಶ್ ಮುಳೂರು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದ ಹಲ್ದ್ವಾನಿಯಲ್ಲಿ ಖರ್ಗೆ ಭಾಷಣ ಮಾಡಿದ ಬಳಿಕ ಅದೇ ಸ್ಥಳದಲ್ಲಿ ಹೋಮ-ಹವನ ನಡೆಸಿರುವುದು ಜಾತಿ ತಾರತಮ್ಯ ಹಾಗೂ ಅವಮಾನವನ್ನು ತೋರಿಸುತ್ತದೆ ಎಂದು ಆರೋಪಿಸಿದರು. ಈ ಕುರಿತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕಾಗಿತ್ತು ಎಂದರು.

ದಲಿತರು ಹಾಗೂ ಶೋಷಿತರ ಪರವಾಗಿ ರಾಹುಲ್ ಗಾಂಧಿ ಧ್ವನಿ ಎತ್ತುತ್ತಿದ್ದಾರೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸುವ ಮೂಲಕ ದಲಿತರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ. ದೇಶದ ದಲಿತರು ಹಾಗೂ ಶೋಷಿತ ವರ್ಗದವರು ರಾಹುಲ್ ಗಾಂಧಿ ಅವರೊಂದಿಗೆ ನಿಲ್ಲಲಿದ್ದಾರೆ ಎಂದು ದಿನೇಶ್ ಮುಳೂರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪ್ರೇಮ್ ನಾಥ್ ಪಿ.ಬಿ., ಟಿ. ಹೊನ್ನಯ್ಯ , ರವಿ ಸುಂಕದಕಟ್ಟೆ ಸಹಿತ ಮತ್ತಿತರರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!