ಮಂಗಳೂರು: ಕೃಷ್ಣಾಷ್ಟಮಿ ಹಬ್ಬದ ಪ್ರಯುಕ್ತ ಹೂವಿನ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಗಳ ವಿರುದ್ಧ ನಗರಪಾಲಿಕೆ ಕಾರ್ಯಾಚರಣೆಗೆ ಮುಂದಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ಮಿನಿವಿಧಾನಸೌಧದ ಎದುರು ಹೂವಿನ ವ್ಯಾಪಾರಕ್ಕೆ ಸಂಬಂಧಿಸಿದಂತೆ ಪಾಲಿಕೆ ಲಾರಿ ಕಾರ್ಯಾಚರಣೆಗೆ ಬಂದಿದ್ದು, ಇದನ್ನು ವ್ಯಾಪಾರಿಗಳು ತಡೆದು ಪ್ರತಿಭಟಿಸಿದ್ದಾರೆ.

ಹಬ್ಬದ ಸಂದರ್ಭದಲ್ಲೂ ವ್ಯಾಪಾರ ನಡೆಸಲು ಅವಕಾಶ ನೀಡದಿರುವುದಕ್ಕೆ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೃಷ್ಣಾಷ್ಟಮಿ ಹಬ್ಬದ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಈ ಘಟನೆ ನಡೆದಿದ್ದು, ಮಿನಿವಿಧಾನಸೌಧದ ಎದುರು ವ್ಯಾಪಾರಿಗಳ ಆಕ್ರೋಶ ವ್ಯಕ್ತವಾಗಿದೆ.

