ಪರಶುರಾಮ್ ಎಕ್ಸ್‌ಪ್ರೆಸ್‌ನಲ್ಲಿ ವಿದ್ಯಾರ್ಥಿಯ ಬ್ಯಾಗ್ ಕಳವು: ಆರೋಪಿ ಬಂಧನ

​ಕಾಸರಗೋಡು: ಪರಶುರಾಮ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಂಚರಿಸುತ್ತಿದ್ದ ಕಾಲೇಜು ವಿದ್ಯಾರ್ಥಿಯ ಬ್ಯಾಗ್ ಕಳವು ಮಾಡಿದ್ದ ಆರೋಪಿಯನ್ನು ಕಾಸರಗೋಡು ರೈಲ್ವೇ ಪೊಲೀಸರು ಗುರುವಾರ ಮುಂಜಾನೆ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.ಮಲಪ್ಪುರಂ ಮೂಲದ ಮೊಹಮ್ಮದ್ ಜಾಬೀರ್ (38) ಬಂಧಿತ ಆರೋಪಿ.

​ಆಗಸ್ಟ್ 22ರಂದು ಮಂಗಳೂರಿನ ಶ್ರೀನಿವಾಸ ಕಾಲೇಜು ವಿದ್ಯಾರ್ಥಿ ವಿಷ್ಣುದತ್ ಮಂಗಳೂರಿಗೆ ಪ್ರಯಾಣಿಸುತ್ತಿದ್ದಾಗ, ಅವರ ಬಳಿಯಿದ್ದ ಲ್ಯಾಪ್‌ಟಾಪ್ ಹಾಗೂ ಪ್ರಮುಖ ಸಾಮಗ್ರಿಗಳಿದ್ದ ಎರಡು ಬ್ಯಾಗ್‌ಗಳನ್ನು ಆರೋಪಿ ಕದ್ದು ಪರಾರಿಯಾಗಿದ್ದನು.

ಸಂತ್ರಸ್ತ ವಿದ್ಯಾರ್ಥಿ ನೀಡಿದ ದೂರಿನನ್ವಯ ತನಿಖೆ ಕೈಗೆತ್ತಿಕೊಂಡ ಎಸ್‌ಐ ಸನಿಲ್ ಕುಮಾರ್ ಸಿ.ಎಸ್. ನೇತೃತ್ವದ ಪೊಲೀಸ್ ತಂಡ, ಜಾಲ ಬೀಸಿ ಆರೋಪಿಯನ್ನು ಯಶಸ್ವಿಯಾಗಿ ಸೆರೆಹಿಡಿದಿದೆ.

SHARE
Loading spinner

2 thoughts on “ಪರಶುರಾಮ್ ಎಕ್ಸ್‌ಪ್ರೆಸ್‌ನಲ್ಲಿ ವಿದ್ಯಾರ್ಥಿಯ ಬ್ಯಾಗ್ ಕಳವು: ಆರೋಪಿ ಬಂಧನ

Leave a Reply

Your email address will not be published. Required fields are marked *

error: Content is protected !!