ಮಂಜೇಶ್ವರ: ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಂಗಡಿಯಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲಾದ ಘಟನೆ ನಡೆದಿದೆ.

ಮೃತರನ್ನು ಕರ್ನಾಟಕ ಮೂಲದ ರಮೇಶ್ (42) ಎಂದು ಗುರುತಿಸಲಾಗಿದೆ.
ಶುಕ್ರವಾರ ರಾತ್ರಿ ಸುಮಾರು 7:45ರ ವೇಳೆಗೆ ಹೊಸಂಗಡಿಯ ನರಸಿಂಹ ಮೂರ್ತಿ ಎಂಬವರ ಹಳೆಯ ಮನೆಯೊಂದರಲ್ಲಿ ತಲೆ ಜಜ್ಜಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಇವರ ಮೇಲೆ ಭೀಕರ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
ಘಟನೆಯ ಹಿಂದೆ ಭಾಗಿಯಾಗಿದ್ದಾರೆನ್ನಲಾದ ಇಬ್ಬರು ವ್ಯಕ್ತಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.

The graphics are top notch and the gameplay is very immersive. It is definitely one of the top choices for gaming in the region. See phjili90