ತ್ರಿಶೂರ್: ಕೇರಳದ ತ್ರಿಶೂರ್ ಜಿಲ್ಲೆಯ ಕೈಪಮಂಗಲಂನಲ್ಲಿ ನಿರ್ಮಾಣ ಹಂತದಲ್ಲಿರುವ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ತಮಿಳುನಾಡಿನ ಎಂಟು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಪನಂಬಿಕ್ಕುನ್ನು ಸೆಂಟರ್ ಬಳಿ ನಿಂತಿದ್ದ ಸರಕು ಸಾಗಣೆ ಲಾರಿಯ ಹಿಂಭಾಗಕ್ಕೆ ತಮಿಳುನಾಡು ನೋಂದಣಿಯ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿಯ ಕೆಳಗೆ ಸಿಲುಕಿಕೊಂಡಿತ್ತು.

ಮೃತರು ದಿಂಡಿಗಲ್‌ನ ಪಿಎಸ್‌ಎನ್‌ಎ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಕೇರಳ ಪ್ರವಾಸಕ್ಕೆ ತೆರಳಿದ್ದರು ಎನ್ನಲಾಗಿದೆ. ಐವರು ಮೃತರನ್ನು ವಿಶ್ವ, ಸೂರ್ಯ, ಸಂಜಿತ್, ಸಂತೋಷ್ ಹಾಗೂ ಪ್ರಸನ್ನ ಎಂದು ಗುರುತಿಸಲಾಗಿದ್ದು, ಉಳಿದ ಮೂವರ ಗುರುತು ಪತ್ತೆ ಕಾರ್ಯ ಮುಂದುವರಿದಿದೆ.
ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರನ್ನು ಕತ್ತರಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ರಸ್ತೆ ಕಾಮಗಾರಿ, ಸೂಕ್ತ ಬೆಳಕು ಹಾಗೂ ಎಚ್ಚರಿಕೆ ಫಲಕಗಳ ಕೊರತೆಯ ಕುರಿತು ಸ್ಥಳೀಯರು ಆರೋಪಿಸಿದ್ದಾರೆ. ಅಪಘಾತದ ಕಾರಣ ಪತ್ತೆಹಚ್ಚಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.


The variety of options here is just insane. I love how everything loads so quickly without any lag. Give brwinxx a try if you want a reliable platform.