ಪುತ್ತೂರು: ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಹೃದಯಾಘಾತಗೊಂಡು ಯುವಕನೋರ್ವ ಮೃತಪಟ್ಟಿರುವ ಘಟನೆ ಸೆಪ್ಟೆಂಬರ್ 5ರಂದು ಸಂಜೆ ಪುತ್ತೂರಿನಲ್ಲಿ ನಡೆದಿದೆ.ಮೃತರನ್ನು ಆರ್ಯಾಪು ಗ್ರಾಮದ ಕುಂಜೂರುಪಂಜ ನಿವಾಸಿ ರಮೇಶ್ ರೈ ಅವರ ಪುತ್ರ, ಬೊಳುವಾರು ನಿವಾಸಿ ಶ್ರಮಿಕ್ (10)ಎಂದು ಗುರುತಿಸಲಾಗಿದೆ.ಶ್ರಮಿಕ್ ಅವರು ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿಯಾಗಿದ್ದರು.

ಬೊಳುವಾರಿನ ಜಿಮ್ ಸೆಂಟರ್ ನಲ್ಲಿ ವರ್ಕೌಟ್ ಮಾಡುತ್ತಿರುವ ವೇಳೆ ಉಸಿರುಕಟ್ಟಿದಂತಾಗಿತ್ತು. ಕೂಡಲೇ ಅವರನ್ನು ಬೊಳುವಾರಿನ ಖಾಸಗಿ ಆಸ್ಪತ್ರೆಗೆ ಕರೆ ತರಲಾಗಿತ್ತಾದರೂ ಅಲ್ಲಿ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಯ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.

