ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಸಂತೋಷ್ ಕುಮಾರ್ ಶೆಟ್ಟಿ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಮಂಗಳೂರಿನ ಸರ್ಕಿಟ್ ಹೌಸ್ನಲ್ಲಿ ಭೇಟಿಯಾದರು.

ಈ ಸಂದರ್ಭದಲ್ಲಿ ಸಂತೋಷ್ ಕುಮಾರ್ ಶೆಟ್ಟಿ ಅವರು ಬಿ.ಕೆ. ಹರಿಪ್ರಸಾದ್ ಅವರಿಗೆ ಶಾಲು ಹೊದಿಸಿ ಗೌರವ ಸಲ್ಲಿಸಿದರು.ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿಯಾಗಿ ಸಂತೋಷ್ ಕುಮಾರ್ ಶೆಟ್ಟಿ ಅವರು ಶುಭಾಶಯ ಹಾಗೂ ಗೌರವ ಸಲ್ಲಿಸಿದರು.


