ಮಂಗಳೂರು: ಮನೆ ಕೆಲಸದವರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿತೆಯನ್ನು ಕಾವೂರು ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಕಾವೂರು ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 33/2019ರ ಕಲಂ 381 ಐಪಿಸಿ ಪ್ರಕರಣದಲ್ಲಿ, ಮಂಗಳೂರಿನ ಮಾನ್ಯ ಹಿರಿಯ ಸಿಜೆ ಮತ್ತು ಸಿಜೆಎಂ ನ್ಯಾಯಾಲಯದ LPC No. 05/2024ರ ಅಡಿಯಲ್ಲಿ ಲತಾ ಮಾರಿಯಾ (44) ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರು.ಆರೋಪಿತೆಯ ವಿರುದ್ಧ ದಸ್ತಗಿರಿ ವಾರಂಟ್ ಹೊರಡಿಸಲಾಗಿತ್ತು. ಬಳಿಕ ತಲೆಮರೆಸಿಕೊಂಡಿದ್ದ ಆರೋಪಿತೆಯನ್ನು ಕಾವೂರು ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಜ್ಯೋತಿ ನಗರದಿಂದ ದಸ್ತಗಿರಿ ಮಾಡಿದ್ದಾರೆ.ಆರೋಪಿತೆಯನ್ನು ಇಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.


