ಕಾಸರಗೋಡು : ನೇತ್ರಾವತಿ ಎಕ್ಸ್ಪ್ರೆಸ್ ರೈಲಿನ ಎಸಿ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಟಿಕೆಟ್ ಪರಿಶೋಧಕನನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.ಕೊಲ್ಲಂ ಕಡಕ್ಕಲ್ ನಿವಾಸಿ ಶಿಜು ಬಂಧಿತ ಆರೋಪಿ.

ದಂಪತಿ ಒಂದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದರೂ, ಸೀಟುಗಳು ಬೇರೆ ಬೇರೆ ಕಡೆ ಕಾಯ್ದಿರಿಸಲ್ಪಟ್ಟಿದ್ದರಿಂದ ಮಹಿಳೆ ಬೋಗಿಯಲ್ಲಿ ಒಬ್ಬರೇ ಇದ್ದರು. ಈ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡ ಟಿಟಿಇ, ಮಹಿಳೆಯ ಸಮ್ಮತಿಯಿಲ್ಲದೆ ಅನುಚಿತವಾಗಿ ವರ್ತಿಸಿ ದೈಹಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.

ಸಂತ್ರಸ್ತೆ ತಕ್ಷಣವೇ ರೈಲ್ವೆ ಪೊಲೀಸರಿಗೆ ದೂರು ನೀಡಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಯಾಣಿಕರ ಸುರಕ್ಷತೆ ಹೊಣೆ ಹೊರಬೇಕಾದ ಅಧಿಕಾರಿಯೇ ಈ ಕೃತ್ಯ ಎಸಗಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

