ನೂತನ ಜಿಲ್ಲಾ ಅಧ್ಯಕ್ಷರಿಗೆ ಮಾರ್ಗದರ್ಶನ ನೀಡಲು ಕೇಂದ್ರದ ನಾಯಕರಿಂದ ಸಭೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು, ಸೆ 16:”ನೂತನವಾಗಿ ಜಿಲ್ಲಾ ಅಧ್ಯಕ್ಷರು ನೇಮಕಗೊಂಡಿದ್ದು, ಅವರಿಗೆ ಮಾರ್ಗದರ್ಶನ ನೀಡಲು ಹೈಕಮಾಂಡ್ ನಾಯಕರು ಸಭೆ ಕರೆದಿದ್ದಾರೆ” ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಸದಾಶಿವನಗರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಸುರ್ಜೇವಾಲ ಅವರು ಆಗಮಿಸಿರುವ ಬಗ್ಗೆ ಕೇಳಿದಾಗ ಅವರು ಈ ರೀತಿ ಉತ್ತರಿಸಿದರು.

ನಾಳೆಯಿಂದ (ಗುರುವಾರ) 3 ದಿನಗಳ ಕಾಲ ವಿವಿಧ ಜಿಲ್ಲೆಗಳ ಪ್ರವಾಸದ ಬಗ್ಗೆ ಕೇಳಿದಾಗ, “ಇಂದಿನಿಂದ (ಬುಧವಾರ) ಕಲಬುರಗಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಪ್ರವಾಸ ಮಾಡಲಿದ್ದೇನೆ. ವಿಧಾನ ಮಂಡಲ ಅಧಿವೇಶನದಲ್ಲಿ ಬರಗಾಲ ಹಾಗೂ ಕಸ್ತೂರಿ ರಂಗನ್ ವರದಿಯ ಕುರಿತಂತೆ ಚರ್ಚೆ ನಡೆಯಲಿದೆ” ಎಂದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!