ಮಂಗಳೂರು:ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನದ ಆಚರಣೆಗೆ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಯಿತು.



ಮಂಗಳೂರಿನ ಕ್ಲಾಕ್ ಟವರ್ ಮುಂಭಾಗ ನಡೆದ ಪ್ರತಿಭಟನೆಯಲ್ಲಿ, ಮೋದಿ ಆಡಳಿತದಲ್ಲಿ ನಿರುದ್ಯೋಗ ಹೆಚ್ಚಳವಾಗಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನವಾಜ್ ಇಬ್ರಾಹಿಂ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯ ಭಾಗವಾಗಿ ಪಕೋಡಾ ಹಾಗೂ ಬಜ್ಜಿ ತಯಾರಿಸಿ ಹಂಚಲಾಯಿತು. ಸಚಿವ ಹೆಚ್.ಸಿ. ಬಾಲಕೃಷ್ಣ ಸೇರಿದಂತೆ ಕಾಂಗ್ರೆಸ್ ಮುಖಂಡರು ಈ ವಿಭಿನ್ನ ಪ್ರತಿಭಟನೆಯಲ್ಲಿ ಭಾಗವಹಿಸಿ ಪಕೋಡಾ ಹಾಗೂ ಬಜ್ಜಿ ಸವಿದರು.
ಕೇಂದ್ರ ಸರ್ಕಾರದ ಉದ್ಯೋಗ ನೀತಿ ಹಾಗೂ ನಿರುದ್ಯೋಗ ಸಮಸ್ಯೆಯನ್ನು ಮುಂದಿಟ್ಟುಕೊಂಡು ಈ ಪ್ರತಿಭಟನೆ ನಡೆಸಲಾಗಿದೆ ಎಂದು ಯುವ ಕಾಂಗ್ರೆಸ್ ಮುಖಂಡರು ತಿಳಿಸಿದರು.


